ಬೆಂಗಳೂರು; ರಾಜ್ಯದಲ್ಲಿ ಲಾಕ್ಡೌನ್ ಇನ್ನೂ 24 ವರೆಗೂ ಇದೆ. ಎರಡು ಮೂರು ದಿನಗಳ ಬಳಿಕ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಅಲ್ಲದೇ ಲಾಕ್ಡೌನ್ ಸಂತ್ರಸ್ತರಿಗೆವಿಶೇಷ ಪ್ಯಾಕೇಜ್ ಬಗ್ಗೆ ಸಹ ಚರ್ಚೆ ಮಾಡ್ತೀವಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು.
ಜಿಲ್ಲಾಡಳಿತಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಮೊದಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಗಳ ಜತೆ ಸಭೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಿದೆ. ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇನೆ. ಟೆಸ್ಟ್ ರಿಪೋರ್ಟ್ 24 ಗಂಟೆ ಒಳಗೆ ಕೊಡಬೇಕು. ಹೋಂ ಐಸೋಲೆಷನ್ ಇರೋರಿಗೆ ಮೆಡಿಕಲ್ ಕಿಟ್ ನೀಡಬೇಕು. ಮನೆ ಮನೆಗೂ ಹೋಗಿ ಟೆಸ್ಟ್ ಮಾಡಲು ಹಾಗೂ ಸಕಾಲದಲ್ಲಿ ಚಿಕಿತ್ಸೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.
ಅಗತ್ಯ ಕೋವಿಡ್ ಕೇರ್ ಸೆಂಟರ್ ತೆರೆಯಲು ಹೇಳಿದ್ದೇನೆ.ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ದಾಖಲು ಮಾಡಬೇಕು. ಆಕ್ಸಿಜನ್ ಸಮಸ್ಯೆ ಇದ್ರೆ ನೆರೆ ಜಿಲ್ಲೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರಿದೂಗಿಸಿಕೊಳ್ಳಬೇಕು.  ಪರಿಸ್ಥಿತಿ ಅನುಗುಣವಾಗಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು ಎಂದರು.
ಬ್ಲಾಕ್ ಫಂಗಸ್ ಬಗ್ಗೆ ಎಚ್ಚರಿಕೆ ಇಂದ ಇರುವಂತೆ ಸೂಚನೆ ನೀಡಿದ್ದೇವೆ. ಇದಕ್ಕಾಗಿ ಇಂದಿನಿಂದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ ಶಿವಮೊಗ್ಗ, ಮೈಸೂರು, ಕಲ್ಬುರ್ಗಿ, ಹುಬ್ಬಳ್ಳಿಯಲ್ಲಿ ಚಿಕಿತ್ಸೆ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ;ಮಂಗಣ್ಣನ ಕರಾಮತ್ತು ಹೇಗಿದೆ ನೋಡಿ.. ಇಂತದ್ದೊಂದು ಮಂಗ ಇದ್ದರೆ ಕೆಲಸ ಸಲೀಸು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
