ಬೆಂಗಳೂರು:ರಾಮನಗರ ಜಿಲ್ಲೆ ಹೆಸರು ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರ ನಿವಾಸದ ಬಳಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ ಕುಮಾರಸ್ವಾಮಿ ಹಣೆಬರಹ ಬರೆಯುವುದು ಭಗವಂತ ಮತ್ತು ರಾಜ್ಯದ ಏಳೂವರೆ ಕೋಟಿ ಜನತೆ.ಕಾದು ನೋಡೊಣ ಭಗವಂತ ಯಾರು ಯಾರು ಹಣೆಬರಹ ಏನು ಬರೆಯುತ್ತಾನೆ, ಈಗಾಗಲೇ ಏನೇನು ಬರೆದಿದ್ದಾನೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟರು.
ನಾವು ಯಾವತ್ತು ಡಿ.ಕೆ.ಶಿವಕುಮಾರ್ ಅವರನ್ನ ನೆನಪು ಮಾಡಿಕೊಳ್ಳುವುದಿಲ್ಲ. ಆದರೆ ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಅವರು ತೆಗೆದುಕೊಳ್ಳುತ್ತಿರುವ ನಡೆಗಳು ಸರಿಯಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬದಲಾವಣೆ ಮಾಡಿದರೆ ಅನೇಕ ತಾಂತ್ರಿಕ ಸಮಸ್ಯೆ ಆಗಲಿವೆ. ಸಾಕಷ್ಟು ಸಮಸ್ಯೆಗಳು ತಲೆದೋರುತ್ತವೆ. ಅಷ್ಟು ಸುಲಭವಾಗಿ ಹೆಸರು ಬದಲಾವಣೆ ಮಾಡುವುದು ಸಾಧ್ಯವಿಲ್ಲ ಎಂದರು.
2006ರಲ್ಲಿ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆ ಮಾಡಿದರು. ಆಗ ಯಾರೂ ವಿರೋಧ ಮಾಡಿರಲಿಲ್ಲ, ಎಲ್ಲರೂ ಸಹಮತ ವ್ಯಕ್ತಪಡಿಸಿದರು. ಇವತ್ತು ರಾಮನ ಹೆಸರು ಅಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇವರನ್ನು ಆ ರಾಮನೇ ನೋಡಿಕೊಳ್ಳುತ್ತಾನೆ.ಕಾಂಗ್ರೆಸ್ ಸರ್ಕಾರ ಇವತ್ತು ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲಿ. ಸರ್ಕಾರ ಅವರ ಕೈಯಲ್ಲಿದೆ. ಮುಂದಿನ ದಿನಗಳಲ್ಲಿ ಭಗವಂತ, ರಾಜ್ಯದ ಜನತೆ ಕುಮಾರಸ್ವಾಮಿಗೆ ಶಕ್ತಿ ಕೊಡುತ್ತಾರೆ. ಆಗ ಮತ್ತೊಮ್ಮೆ ರಾಮನಗರ ಜಿಲ್ಲೆ ಹೆಸರು ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ಮಾಡಲು ಹೊರಟಿವೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಈ ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಸಾಮಾನ್ಯವಾಗಿ ಪಾದಯಾತ್ರೆ ಮಾಡೋದು ಸರ್ಕಾರ ಬಂದು 4 ವರ್ಷ ಕಳೆದ ಮೇಲೆ. ಆದರೆ ಈ ಸರ್ಕಾರದ ಭ್ರಷ್ಟಾಚಾರದಿಂದ ಒಂದೂವರೆ ವರ್ಷದಲ್ಲೇ ಪಾದಯಾತ್ರೆ ಮಾಡುವ ಸ್ಥಿತಿ ಬಂದಿದೆ. ರಾಜ್ಯದ ಹಿತಾಸಕ್ತಿಯಿಂದ ಸರ್ಕಾರದ ಅಕ್ರಮ ಖಂಡಿಸಿ ಪ್ರತಿಪಕ್ಷಗಳು ಪಾದಯಾತ್ರೆ, ಪ್ರತಿಭಟನೆ ಮಾಡುತ್ತಿವೆ ಎಂದು ತಿಳಿಸಿದರು.
ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಭಾನುವಾರ ಸಣ್ಣಪುಟ್ಟ ವ್ಯತ್ಯಾಸಗಳು ಆಗಿತ್ತು. ಅಪೋಲೋ ಆಸ್ಪತ್ರೆಯಲ್ಲಿ ತಪಾಸಣೆ ಆಗಿದೆ. ಕೆಲಸದ ಒತ್ತಡದಲ್ಲಿ ರೊಟೀನ್ ಚೆಕ್‌ಅಪ್ ಆಗಿರಲಿಲ್ಲ. ಭಾನುವಾರ ಚೆಕಪ್ ಆಗಿದೆ. ಈಗ ಆರಾಮವಾಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + six =
Remember me
