ಮಂಡ್ಯ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೇಸಿಗೆಯಲ್ಲಿ ಹಳದಿ ಕಲ್ಲಂಗಡಿ ಹಣ್ಣು ತಿನ್ನುವುದರಿಂದ, ಇಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ…?
ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂದು ಹೇಳಿದರು.
ಈಗ ರಾಜ್ಯದಲ್ಲಿ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್ ಮತ್ತು ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್ ಒಂದು ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿರುವುದು. ಬಡವರ ವಿರೋಧಿಯಾಗಿರುವ ಅವರಿಗೆ ಬಜೆಟ್ ಅರ್ಥವಾಗುವುದೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ ಎಂದರು.
ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿ ಆಗಮಿಸುತ್ತಿದ್ದೇನೆ. ಇಲ್ಲಿ ಸಮರ್ಥವಾದ ಮುಖಂಡರು ಮತ್ತು ಶಾಸಕರಿರುವುದರಿಂದ ಪದೇ ಪದೇ ಬರಬೇಕಾದ ಅಗತ್ಯವಿಲ್ಲ. ಜಿಲ್ಲಾ ಮಂತ್ರಿಗಳೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಕ್ಬರ್‌-ಸೀತಾ ಲಿವಿಂಗ್​ ಟುಗೆದರ್​: ಕೋರ್ಟ್​ ಮೆಟ್ಟಿಲೇರಿದ ವಿಶ್ವ ಹಿಂದೂ ಪರಿಷತ್‌! ನ್ಯಾಯಾಲಯ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 20 =
Remember me
