ಉಡುಪಿ:ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣಗೂ ತೊಂದರೆ ಕೊಡುವುದಿಲ್ಲ, ಆರ್.ಅಶೋಕ್​ಗೂ ಅಡ್ಡ ಬರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾತ್ರವಲ್ಲ, ಕಾಂಗ್ರೆಸ್​ ಕಾರ್ಯಕರ್ತರಿಗೂ ಅದನ್ನು ಪಾಲಿಸುವಂತೆ ತಿಳಿಸಿದ್ದಾರೆ.
ರಾಜ್ಯಾದ್ಯಂತ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಇಂದು ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯ ತಿಳಿಸಿದರು. ನಾನು ಟೆಂಪಲ್ ರನ್ ಮಾಡುತ್ತಿಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ. ನಮ್ಮ ಧರ್ಮ, ನಮ್ಮ ಸಂಸ್ಕೃತಿ, ನಮ್ಮ ದೇವರ ಬಗ್ಗೆ ನನಗೆ ನಂಬಿಕೆ ಇದೆ. ಪ್ರಚಾರಕ್ಕಾಗಿ ಹೋದ ಕ್ಷೇತ್ರಗಳ ಎಲ್ಲ ದೇವಸ್ಥಾನಗಳಿಗೂ ಭೇಟಿ ನೀಡಿ ಪ್ರಾರ್ಥಿಸಿಕೊಳ್ಳುತ್ತಿದ್ದೇನೆ ಎಂಬುದಾಗಿ ಅವರು ತಮ್ಮ ದೇವಸ್ಥಾನಗಳ ಭೇಟಿ ಕುರಿತು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ವಿಷ್ಣುವರ್ಧನ್ ಗುಂಗು: ಸೆಟ್ಟೇರಿತು ಮತ್ತೊಂದು ಚಿತ್ರ ‘ಮಾರ್ಗರೇಟ್-ಲವರ್ ಆಫ್ ರಾಮಾಚಾರಿ’
ಕನಕಪುರದಲ್ಲಿ ಆರ್.ಅಶೋಕ ಕೆಲ ನಿಮಿಷಗಳ ಪ್ರಚಾರ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಕನಕಪುರದ ಬಿಜೆಪಿ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಕನಕಪುರದಲ್ಲಿ ಎಷ್ಟು ಬೇಕಾದರೂ ಪ್ರಚಾರ ಮಾಡಲಿ, ಅವರಿಗೆ ದೊಡ್ಡ ಅವಕಾಶ ಇದೆ. ಯಾರ ಮನವನ್ನು ಬೇಕಾದರೂ ಒಲಿಸಲಿ, ಮತದಾರರ ಬಳಿ ಏನು ಬೇಕಾದರೂ ಕೇಳಿಕೊಳ್ಳಲಿ, ಅಶೋಕ್​ಗೆ ಯಾವುದೇ ಅಡಚಣೆ ಮಾಡುವುದಿಲ್ಲ, ನಾವು ಅಡ್ಡ ಬರುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಯಾರೂ ಮಾತನಾಡಬಾರದು, ಗೌರವದಿಂದ ನಡೆದುಕೊಳ್ಳಬೇಕು ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ:ರಾಹುಲ್ ಗಾಂಧಿ, ಸ್ವಾಮೀಜಿದ್ವಯರ ಸಮ್ಮುಖದಲ್ಲಿ ಸಿದ್ದರಾಮಯ್ಯಗೆ ಸಿಗಲೇ ಇಲ್ಲ ಭಾಷಣ ಅವಕಾಶ; ಕಾರಣವೇನು?
ಮೈಸೂರಿನಲ್ಲಿ ವಿ.ಸೋಮಣ್ಣ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತಯಾಚನೆ ಮಾಡುವ ಹಕ್ಕು ಇದೆ. ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಹೋಗಬಾರದು, ಯಾರು ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nineteen − four =
Remember me
