ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಚುರುಕು ಸಾಧ್ಯತೆಗಳ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಕುರಿತು ಹವಾಮಾನ ಇಲಾಖೆ ಇಂದಿನ ವರದಿಯನ್ನು ಪ್ರಕಟಿಸಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಅನ್ನು ಘೋಷಣೆ ಮಾಡಿದೆ.
ಇದನ್ನೂ ಓದಿ:‘ಗದರ್​ 2’ಗೆ ಸಂಕಷ್ಟ!; ಸನ್ನಿ ಡಿಯೋಲ್​ ಚಿತ್ರಕ್ಕೆ​ ಟಕ್ಕರ್​ ಕೊಟ್ಟ ‘ಜವಾನ್’
ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿಂದ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಂವಿಧಾನ ಪೀಠಿಕೆ ಓದು 15ರಂದು  -ಜಿಲ್ಲಾದ್ಯಂತ ಕಾರ್ಯಕ್ರಮ ಆಯೋಜನೆಗೆ ಡಿಸಿ ಡಾ.ವೆಂಕಟೇಶ್ ಸೂಚನೆ
ಸೆಪ್ಟೆಂಬರ್ 13ರ ಬಳಿಕ ಮುಂಗಾರು ಚುರುಕು ಸಾಧ್ಯತೆಯಿದೆ. ರಾಜ್ಯ ರಾಜಧಾನಿಯಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ.
ಇನ್ಮುಂದೆ ಸಿಲಿಕಾನ್​ ಸಿಟಿ ಮತ್ತಷ್ಟು ‘ಶುಭ್ರ’; ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಹೊಸ ಪ್ಲ್ಯಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
