ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಜನರಿಗೆ ಸೂಚನೆ ನೀಡಿದೆ. ಸಾಮಾನ್ಯವಾಗಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಏಪ್ರಿಲ್​ 09ರಂದು  ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಕೊಹ್ಲಿ ಒಂದು ಬಾರಿ ಹೇರ್​ಸ್ಟೈಲ್​ ಮಾಡಿಸಿದರೆ ಅದರ ಬೆಲೆ ಎಷ್ಟು ಗೊತ್ತಾ?; ಆಚ್ಚರಿಯ ಹೇಳಿಕೆ ನೀಡಿದ ಆಲಿಮ್​ ಹಕೀಮ್​
ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ.
ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
