ಬೆಂಗಳೂರು:ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ಬಿರುಸುಗೊಳ್ಳಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು, ತುಮಕೂರು, ಮಂಡ್ಯ, ಕೋಲಾರ ಮತ್ತು ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದೆ.
ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗುತ್ತಿತ್ತು. ಆದರೆ, ಗುರುವಾರ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣ ಜತೆಗೆ ಅಗಾಗ್ಗೆ ಜೋರಾಗಿ ಮಳೆ ಸುರಿಯಿತು. ಇದರಿಂದ ಜನಜೀವನ ಅಸ್ತವ್ಯಸ್ತವಾಗಿತು. ಕೆಲಸಕ್ಕೆ ತೆರಳುವವರು ಮಳೆಯಲ್ಲೇ ನೆನೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂತು.
ಅಂಡಮಾನ್‌ನಲ್ಲಿ ಉಂಟಾಗಲಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ನ.27ರಿಂದ ಮಳೆ ಮತ್ತಷ್ಟು ಬಿರುಸುಗೊಳ್ಳಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ. ಮಳೆ ಜತೆಗೆ ಚಳಿಯೂ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಜನರು ಬೆಚ್ಚಗಿನ ಉಡುಪು ಮೊರೆ ಹೋಗಿದ್ದಾರೆ.

ಗಂಡನ ಕಿರುಕುಳ: ದೇಶದಲ್ಲಿ ಕರ್ನಾಟಕವೇ ಪ್ರಥಮ; ಮದ್ಯವ್ಯಸನಿಗಳಿಂದಲೇ ಜಾಸ್ತಿ ಉಪಟಳ..

ಅಂಬಿ ಇಲ್ಲದ ನಾಲ್ಕು ವರುಷ; ಪತಿಯ ನೆನೆದು ಸುಮಲತಾ ಹೇಳಿದ್ದು ಹೀಗೆ..

ಈ ಸಲ ಬಜೆಟ್​ನಲ್ಲಿ ನಿಮಗೇನು ಬೇಕು, ನೀವೇ ಹೇಳಿ; ನಿಮ್ಮ ಬಳಿಗೇ ಬರಲಿದೆ ವಾಹನ, ಸಲಹೆ ನೀಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
