ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ತೇವಾಂಶ ಭರಿತ ಮೋಡಗಳ ಪ್ರಭಾವದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದುವರಿದಿದೆ.
ಶುಕ್ರವಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸರಾಸರಿ 3-5 ಸೆಂ.ಮೀ. ಮಳೆಯಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 24 ಗಂಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಮತ್ತು ಮೈಸೂರಿನಲ್ಲಿ ಮೇ 22ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​​ ಘೋಷಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ:ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!
24ರ ಬಳಿಕ ಚಂಡಮಾರುತ:ಬಂಗಾಳಕೊಲ್ಲಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಉಂಟಾಗುವ ವಾಯುಭಾರ ಕುಸಿತ ಮೇ 24ರ ನಂತರ ಚಂಡಮಾರುತವಾಗಿ ಪರಿವರ್ತನೆ ಆಗಲಿದೆ. ಈ ಚಂಡಮಾರುತದಿಂದ ರಾಜ್ಯಕ್ಕೆ ಅಷ್ಟೇನೂ ಪರಿಣಾಮ ಬೀರುವುದಿಲ್ಲ. ಆದರೆ, ಇದರ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೇ 25ರಿಂದ ಮೇ 29ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮೇ 25ರ ನಂತರ ಪಶ್ಚಿಮ ಬಂಗಾಳ ಹಾಗೂ ಒರಿಸ್ಸಾದತ್ತ ಮಾರುತಗಳು ಚಲಿಸಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮತ್ತೆ 14 ದಿನ ಲಾಕ್​ಡೌನ್; ಜೂ. 7ರ ಬೆಳಗ್ಗೆ 6ರವರೆಗೂ ಕಠಿಣ ರೂಲ್ಸ್

ಕೋವಿಡ್​ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!

ಕರೊನಾ ಟೆಸ್ಟ್​ ನೀವೇ ಮಾಡಿಕೊಳ್ಳಬಹುದು: ಪರೀಕ್ಷೆಗೆ ಎರಡೇ ನಿಮಿಷ, 15 ನಿಮಿಷಗಳಲ್ಲಿ ಫಲಿತಾಂಶ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
