ಬೆಂಗಳೂರು:ನಾಲ್ಕೈದು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ಜು.18ರಿಂದ ರಾಜ್ಯಾದ್ಯಂತ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿಯ ಕಣಬರ್ಗಿ, ಚಿಕ್ಕಮಗಳೂರಿನ ಮೂಡಿಗೆರೆ, ಹಾವೇರಿಯ ಹನುಮಾನ್ ಮಟ್ಟಿ, ಮೈಸೂರಿನ ಸುತ್ತೂರು, ಹುಣಸೂರಿನಲ್ಲಿ ಶನಿವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡದಲ್ಲಿ ಜು.16ರಿಂದ ಜು.19ರವರೆಗೆ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಜು.18ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ಕೊಟ್ಟಿದೆ.
ಇದನ್ನೂ ಓದಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಸಂಬಂಧ ಬಿ-ರಿಪೋರ್ಟ್ ಅಂಗೀಕೃತ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನಿರಾಳ
ಬೆಳಗಾವಿ ಮತ್ತು ಬೀದರ್‌ನಲ್ಲಿ ಜು.19ರಂದು ತುಸು ಹೆಚ್ಚು ಮಳೆಯಾಗಲಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
