ಬೆಂಗಳೂರು:ಕರ್ನಾಟಕದಾದ್ಯಂತ ಬಿಸಿಲು ತೀವ್ರವಾಗಿದೆ, ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ, ಇಂದು ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯೂ ತುಂಬಾ ಬೆಚ್ಚಗಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಉಳಿದೆಡೆ ಒಣ ಹವೆ ಇರಲಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 12 =
Remember me
