ನವದೆಹಲಿ:ಹವಾಮಾನ ಇಲಾಖೆಯ ಅಂದಾಜಿನ ಪ್ರಕಾರ, ಡಿಸೆಂಬರ್-ಫೆಬ್ರವರಿ ಈ ಬಾರಿ ಚಳಿ ಅಷ್ಟು ಇರುವುದಿಲ್ಲ. ಆದರೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಊಹಿಸಲಾಗಿದೆ. ಅಂದರೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಹಗಲಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಿರುತ್ತದೆ. ದೇಶದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಆದರೆ ವಾಯುವ್ಯ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳಲ್ಲಿ (ದೆಹಲಿ, ದಕ್ಷಿಣ ಹರಿಯಾಣದ ಭಾಗಗಳು, ಪಶ್ಚಿಮ ಉತ್ತರ ಪ್ರದೇಶ ಮತ್ತು ದಕ್ಷಿಣ ಮತ್ತು ಪೂರ್ವ ರಾಜಸ್ಥಾನ ಮತ್ತು ಎಂಪಿ, ಒಳ ಮಹಾರಾಷ್ಟ್ರ ಮತ್ತು ತೆಲಂಗಾಣದ ಹಲವು ಭಾಗಗಳು) ತೀವ್ರ ಚಳಿ ಇರುತ್ತದೆ. ದೆಹಲಿ-ಎನ್‌ಸಿಆರ್‌ನಲ್ಲಿ ವಾಸಿಸುವ ಜನರು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಬದಲಾವಣೆ ನೋಡುವುದಿಲ್ಲ. ರಾತ್ರಿ ವೇಳೆ ದೇಶದಾದ್ಯಂತ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನವಿರುತ್ತದೆ ಎಂದು ಊಹಿಸಿದೆ.
ದೇಶದಾದ್ಯಂತ ರಾತ್ರಿ (ಕನಿಷ್ಠ ತಾಪಮಾನ) ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಉತ್ತರ, ವಾಯುವ್ಯ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಶೀತ ಕಂಡುಬರಬಹುದು.
ಕೆಲವೆಡೆ ಮಳೆಯಾಗುವ ಸಾಧ್ಯತೆಐಎಂಡಿ ಪ್ರಕಾರ, ಡಿಸೆಂಬರ್‌ನಲ್ಲಿ ಮಧ್ಯ ಮತ್ತು ಪೂರ್ವ ಭಾರತದ ವಾಯುವ್ಯ ಮತ್ತು ಪಕ್ಕದ ಪ್ರದೇಶಗಳಲ್ಲಿ ಮತ್ತು ದೂರದ ದಕ್ಷಿಣದ ಕೆಲವು ಪ್ರದೇಶಗಳಲ್ಲಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.
ಈಶಾನ್ಯ, ಉತ್ತರ ಪೆನಿನ್ಸುಲರ್ ಭಾರತ ಮತ್ತು ಮಧ್ಯ ಭಾರತದ ಪಕ್ಕದ ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ನಿರೀಕ್ಷಿಸಲಾಗಿದೆ. ಸರಾಸರಿ ತಾಪಮಾನಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಭಾರತದಲ್ಲಿ ಹವಮಾನ ಅತ್ಯಂತ ಬಿಸಿಯಾಗಿತ್ತು ಎಂದು ಐಎಂಡಿ ಹೇಳಿದೆ.
ಕಲಾಪದಲ್ಲಿ ಜಂಟಿ ಸಮರ; ಬಿಜೆಪಿ-ಜೆಡಿಎಸ್​ ನಾಯಕರಿಂದ ರಹಸ್ಯ ಸಮಾಲೋಚನೆ



ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − twelve =
Remember me
