ಏಪ್ರಿಲ್ 2024ರಲ್ಲಿ ಒಂದೊಂದು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬೆನ್ನಲ್ಲೇ ಇದೀಗ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ & ಬೆಂಗಳೂರು ನಗರವು ಸೇರಿ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗೆ ಮಳೆಯ ಸಿಂಚನ ಆಗಲಿದೆ.ಆದರೂ ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ & ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಸದ್ಯ ಸಿಲಿಕಾನ್​ ಸಿಟಿ ಬೆಂಗಳೂರು ಸೇರಿದಂತೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಿಗೂ ಮಳೆರಾಯ ತಂಪೆರೆದಿದ್ದಾನೆ. ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕದ ವಾತಾವರಣ ಕೂಲ್ ಕೂಲ್ ಆಗ್ತಿದೆ. ಹೀಗಾಗಿ, ಬಿಸಿಲಿನಿಂದ ಬೇಸತ್ತಿದ್ದ ಜನರ ಮೊಗದಲ್ಲಿ ಮಳೆರಾಯ ಮಂದಹಾಸ ಮೂಡಿಸಿದ್ದಾನೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಪೂರ್ವ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಜೂನ್ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ 5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್‌ ಮತ್ತು ಕೊಮೊರಿನ್ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲಿದೆ. ಕೇರಳಕ್ಕೆ ನಾಳೆ ಅಥವಾ ನಾಡಿದ್ದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 19 =
Remember me
