ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿ ಸಿಟ್ಟಿಗೆದ್ದಿದ್ದ ನೇಕಾರ ಸಮುದಾಯಕ್ಕೆ ಸರ್ಕಾರ ಸಮಾಧಾನದ ಸುದ್ದಿ ನೀಡಿದೆ.ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಎಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸುವುದಾಗಿ ನೇಕಾರ ಸಮುದಾಯಕ್ಕೆ ಸರ್ಕಾರ ಭರವಸೆ ನೀಡಿದೆ.
ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸುವುದಾಗಿ ಅಭಯ ನೀಡಿದರು.
ಇದಲ್ಲದೆ 10 ಎಚ್‌ಪಿವರೆಗಿನ ಘಟಕಗಳಿಗೆ 250 ಯುನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರಲ್ಲದೇ ಹಿಂದುಳಿದ ವರ್ಗಗಳ 2 ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದೆ ಎಂದು ವಿವರಿಸಿದರು.
ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನೂ ನೀಡುವಂತೆ ನೇಕಾರರ ನಿಯೋಗ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿತು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.
ಹಂಪಿ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ಶ್ರೀ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಶ್ರೀ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶ್ರೀ ಶಿವಾನಂದ ಸ್ವಾಮೀಜಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್. ಸೋಮಶೇಖರ ಮತ್ತಿತರರು ನಿಯೋಗದಲ್ಲಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × two =
Remember me
