|ಹೀರಾನಾಯ್ಕ ಟಿ.ವಿಜಯಪುರ
ರಾಜ್ಯದಲ್ಲಿ ಪ್ರವಾಹದಿಂದ ಚೇತರಿಸಿಕೊಳ್ಳುವಷ್ಟರಲ್ಲಿಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿಯೂ ಪರಿಣಾಮ ಬೀರಿದ್ದು, ದ್ರಾಕ್ಷಿ ಬೆಳೆಗಾರರ ಬದುಕು ಹುಳಿಯನ್ನಾಗಿಸಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ರೀತಿ ಸೃಷ್ಟಿಗೊಂಡಿದ್ದು, ಶನಿವಾರ ಬೆಳಗ್ಗೆಯಿಂದಲೇ ಮಳೆಯಾಗಿದೆ. ಮುಸುಕಿನ ವಾತಾವರಣದಿಂದಾಗಿ ದ್ರಾಕ್ಷಿ ಎಲೆಗಳು ಕಪ್ಪು ಬಣ್ಣಕ್ಕೆ ತಿರುಗಿವೆ.
ರಾಜ್ಯದಲ್ಲಿಯೇ ವಿಜಯಪುರ ದ್ರಾಕ್ಷಿ ಬೆಳೆಯುವ ಜಿಲ್ಲೆಗಳಲ್ಲಿ ಅಗ್ರಸ್ಥಾನ ಹೊಂದಿದೆ. ಇಲ್ಲಿನ ಒಣದ್ರಾಕ್ಷಿ ದೇಶ- ವಿದೇಶಗಳಿಗೆ ರಫ್ತಾಗುತ್ತವೆ. ಆದರೆ ಈ ಬಾರಿ ಕರೊನಾ ಮಹಾಮಾರಿಯಿಂದ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಗದೆ ಕಂಗಲಾಗಿದ್ದ ಬೆಳೆಗಾರರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈಗಾಗಲೇ ದ್ರಾಕ್ಷಿಯಲ್ಲಿ ಚಾಟಣಿ ಕೆಲಸ ಪೂರ್ಣಗೊಂಡಿದ್ದು, ಬೆಳೆಗಾರರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ಆದರೆ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಸೃಷ್ಟಿಗೊಂಡಿದ್ದು, ಜಿಟಿಜಿಟಿ ಮಳೆಯಿಂದಾಗಿ ದ್ರಾಕ್ಷಿಗೆ ರೋಗಬಾಧೆ ಹೆಚ್ಚಾಗಿದೆ.
ರಾಜ್ಯದಲ್ಲಿ ಒಟ್ಟು 29 ಸಾವಿರ ಹೆಕ್ಟೇರ್​ನಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದ್ದು, ಅದರಲ್ಲಿ ವಿಜಯಪುರ 13,600 ಹೆಕ್ಟೇರ್, ಬಾಗಲಕೋಟೆ 2900 ಹೆಕ್ಟೇರ್, ಬೆಳಗಾವಿ 2200 ಹೆಕ್ಟೇರ್ ಸೇರಿದಂತೆ ಗದಗ, ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಹೀಗೆ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ದ್ರಾಕ್ಷಿ ಬೆಳೆಯಲಾಗುತ್ತದೆ. ರಾಜ್ಯದ ಶೇ.50ರಿಂದ 60 ರಷ್ಟು ದ್ರಾಕ್ಷಿ ಕ್ಷೇತ್ರವನ್ನು ವಿಜಯಪುರ ಜಿಲ್ಲೆ ಒಂದೇ ಹೊಂದಿದೆ. ವಾರ್ಷಿಕ ಸರಾಸರಿ 2.69 ಲಕ್ಷ ಟನ್ ದ್ರಾಕ್ಷಿ ಬೆಳೆಯಲಾಗುತ್ತದೆ. ಅದರಲ್ಲಿ 67,370 ಟನ್ ಒಣದ್ರಾಕ್ಷಿ ಉತ್ಪಾದನೆಯಾಗುತ್ತದೆ. ಅರಬ್ ರಾಷ್ಟ್ರಗಳಿಗೆ ಇಲ್ಲಿನ ಒಣದ್ರಾಕ್ಷಿ ರಫ್ತು ಮಾಡಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಬೆಲೆ ಕುಸಿತದಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಪ್ರತಿ ಟನ್ ದ್ರಾಕ್ಷಿ ಬೆಳೆಗೆ 1.50 ಲಕ್ಷ ರೂ. ಉತ್ಪಾದನಾ ವೆಚ್ಚ ವಾಗಲಿದೆ. ಆದರೆ ಪ್ರಸಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 140 ರೂ. ನಿಂದ 150 ರೂ. ವರೆಗೆ ಮಾತ್ರ ಬೆಲೆ ದೊರಕುತ್ತಿದೆ. ಪ್ರತಿ ಕೆಜಿಗೆ 200 ರೂ. ವರೆಗೆ ದೊರಕಿದರೆ ಬೆಳೆಗಾರರು ನಿಟ್ಟುಸಿರು ಬಿಡುತ್ತಾರೆ. ಇನ್ನೂ ಆನ್​ಲೈನ್ ಟ್ರೇಡಿಂಗ್ ಕೇಂದ್ರದ ಬಾಗಿಲು ಮುಚ್ಚಿದ್ದು, ಇದರಿಂದಾಗಿ ಮಾರುಕಟ್ಟೆ ವ್ಯವಸ್ಥೆಗೆ ಪೆಟ್ಟುಬಿದ್ದಿದೆ ಎಂದು ದ್ರಾಕ್ಷಿ ಬೆಳೆಗಾರ ಅರವಿಂದ ರಾಠೋಡ ಹೇಳುತ್ತಾರೆ.
ಹವಾಮಾನ ವೈಪರಿತ್ಯದಿಂದಾಗಿ ಉತ್ತರ ಕರ್ನಾಟಕದ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರೊನಾದಿಂದಾಗಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಗದೆ ಕಳೆದ ಬಾರಿ ಬೆಳೆಗಾರರು ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ರ್ಚಚಿಸಿ ರೈತರಿಗೆ ನ್ಯಾಯ ಒದಗಿಸಬೇಕು.
|ಅಭಯಕುಮಾರ ನಾಂದ್ರೇಕರದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ
ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಹೀಗೆ ಮುಂದುವರಿದರೆ ದ್ರಾಕ್ಷಿ ಸೇರಿ ತೋಟಗಾರಿಕಾ ಬೆಳೆಗಳಿಗೆ ರೋಗಬಾಧೆ ಹೆಚ್ಚಾಗಲಿದೆ. ಈ ಬಗ್ಗೆ ಕೃಷಿ ಹಾಗೂ ತೋಟಗಾರಿಕಾ ವಿಜ್ಞಾನಿಗಳೊಂದಿಗೆ ಚರ್ಚಿಸಿ ರೋಗಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
|ಎಸ್.ಎಂ. ಬರಗಿಮಠಉಪ ನಿರ್ದೇಶಕ, ತೋಟಗಾರಿಕೆ ಇಲಾಖೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
