ಬೆಂಗಳೂರು:ಕರೊನಾ ವಾರಿಯರ್ಸ್ ಪೊಲೀಸರಿಗೆ ಅನಾರೋಗ್ಯದ ಭೀತಿ ಎದುರಾಗಿದೆ. ಸರ್ಕಾರ ಬಾಕಿ ಹಣ ಪಾವತಿಸಿಲ್ಲ ಎಂಬ ಕಾರಣಕ್ಕೆ ‘ಆರೋಗ್ಯ ಭಾಗ್ಯ’ ಯೋಜನೆಯಡಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡುವುದನ್ನು ಖಾಸಗಿ ಆಸ್ಪತ್ರೆಗಳು ಸ್ಥಗಿತಗೊಳಿಸಿವೆ. ಕರೊನಾ ಸಂದರ್ಭದಲ್ಲಿ ಆರೋಗ್ಯ ಭಾಗ್ಯ ಯೋಜನೆಯಡಿ ಚಿಕಿತ್ಸೆ ಸ್ಥಗಿತಗೊಳಿಸಿರುವ ಆಸ್ಪತ್ರೆಗಳು ಹಾಗೂ ಹಣ ಪಾವತಿಸುವಲ್ಲಿ ಉದಾಸೀನ ತೋರಿರುವ ರಾಜ್ಯ ಸರ್ಕಾರದ ವಿರುದ್ಧ ಪೊಲೀಸ್ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಆರೋಗ್ಯ ಭಾಗ್ಯ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಬಿಡುಗಡೆ ಮಾಡಬೇಕಿರುವ ಕೋಟ್ಯಂತರ ರೂ. ಮೊತ್ತವನ್ನು ರಾಜ್ಯ ಸರ್ಕಾರ ಕಳೆದೆರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಆಸ್ಪತ್ರೆಗಳಿಗೆ ಯೋಜನೆಯಡಿ ಚಿಕಿತ್ಸೆ ನೀಡುವುದನ್ನು ಸ್ಥಗಿತಗೊಳಿಸಿವೆ. ಮುಂದಿನ ಆದೇಶದವರೆಗೆ ಆರೋಗ್ಯ ಭಾಗ್ಯ ಯೋಜನೆಯಡಿ ಚಿಕಿತ್ಸೆ ಸಿಗುವುದಿಲ್ಲ ಎಂದು ಆಸ್ಪತ್ರೆಗಳ ಮುಂಭಾಗ ಭಿತ್ತಿಪತ್ರಗಳನ್ನು ಅಂಟಿಸಲಾಗುತ್ತಿದೆ.
ಬರೀ ಬೆಂಗಳೂರಲ್ಲೇ 2,300ಕ್ಕೂ ಹೆಚ್ಚು ಪೊಲೀಸರಿಗೆ ಕರೊನಾ ಸೋಂಕು ತಗುಲಿದ್ದು, 20ಕ್ಕೂ ಹೆಚ್ಚು ಕರ್ತವ್ಯ ನಿರತ ಪೊಲೀಸರು ಚಿಕಿತ್ಸೆ ಫಲಿಸದೇ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆತಂಕ ನಡುವೆ ಕೆಲಸ ಮಾಡುವಂತಾಗಿದೆ. ಇದರ ನಡುವೆಯೇ ‘ಆರೋಗ್ಯ ಭಾಗ್ಯ’ ಯೋಜನೆಯಡಿ ಚಿಕಿತ್ಸೆ ಸಿಗದಿರುವುದು ಪೊಲೀಸರಿಗೆ ಮತ್ತಷ್ಟು ಚಿಂತೆಗೀಡು ಮಾಡಿದೆ. ಆರೋಗ್ಯ ಭಾಗ್ಯ ಟ್ರಸ್ಟ್ ಅಧಿಕಾರಿಗಳ ಮಾಹಿತಿ ಪ್ರಕಾರ ಇಲಾಖೆಯಲ್ಲಿ ಪ್ರತಿ ತಿಂಗಳು 1800 ಸಿಬ್ಬಂದಿ ಆರೋಗ್ಯ ಭಾಗ್ಯ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4.5 ಕೋಟಿ ರೂ. ಆಸ್ಪತ್ರೆ ಬಿಲ್ ಪಾವತಿಸಲಾಗುತ್ತಿದೆ.ಇದನ್ನೂ ಓದಿ:Web Exclusive: ಲಾಕ್​ಡೌನ್​​ನಿಂದ ತಪ್ಪಿತು ಸಂಗೀತದ ತಾಳ; ವಿದ್ಯಾರ್ಥಿಗಳ ಕಾಯುವಿಕೆಗೆಂದು ಕೊನೆ?
ಕಾನ್ಸ್​ಟೆಬಲ್, ಹೆಡ್ ಕಾನ್ಸ್​ಟೆಬಲ್, ಎಎಸ್​ಐ, ಎಸ್​ಐ, ಇನ್​ಸ್ಪೆಕ್ಟರ್ ಹಾಗೂ ಎಸಿಪಿ/ಡಿವೈಎಸ್ಪಿವರೆಗೆ ಉಚಿತವಾಗಿ ಚಿಕಿತ್ಸೆ ನೀಡಲು ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಫಲಾನುಭವಿಗಳಾಗಲು ಪ್ರತಿಯೊಬ್ಬ ಸಿಬ್ಬಂದಿಯಿಂದ ಪ್ರತಿತಿಂಗಳು 200 ರೂ. ವೇತನದಲ್ಲಿ ಕಡಿತಗೊಳಿಸಲಾಗುತ್ತಿದೆ. ಆದರೆ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಸಿಗದಿರುವುದು ಪೊಲೀಸರಲ್ಲಿ ಆಕ್ರೋಶ ವ್ಯಕ್ತವಾಗಿದೆ.ಇದನ್ನೂ ಓದಿ:Web Exclusive| ಜನಹೃದಯದಲ್ಲಿ ನೆಲೆಗೊಂಡ ವಿಶಿಷ್ಟ ವ್ಯಕ್ತಿತ್ವ: ಸಾಹಿತಿ ಗೊ.ರು.ಚನ್ನಬಸಪ್ಪ ವಿಶೇಷ ಲೇಖನ
Web Exclusive: ಕಬ್ಬು ಕಟಾವಿಗೂ ಕರೊನಾ ಕಂಟಕ; ‘ಕಾರ್ವಿುಕರ ಗ್ಯಾಂಗ್’ ಬರಲು ಹಿಂದೇಟು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × 2 =
Remember me
