ಬೆಂಗಳೂರು:ರಾಜ್ಯದಲ್ಲಿ ಕೋವಿಡ್​ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಸಾವು-ನೋವಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ವೀಕ್ ಎಂಡ್ ಲಾಕ್​ಡೌನ್ ಅಸ್ತ್ರ ಬಳಸಿದ್ದು, ಇಂದು(ಜು.25) ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ರಾಜ್ಯ ವ್ಯಾಪಿ ಲಾಕ್​ಡೌನ್​ ಜಾರಿಯಲ್ಲಿರಲಿದೆ.
ಜು.14ರಿಂದ 22ರವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್​ಡೌನ್​ ಮಾಡಲಾಗಿತ್ತು. ಇದೀಗ ಮತ್ತೆ 36 ಗಂಟೆಗಳ ಕಾಲ ಲಾಕ್​ಡೌನ್ ಜಾರಿ ಆಗಿದ್ದು, ನಿಷೇಧಾಜ್ಞೆ ನಡುವೆ ಜನರು ಬೇಕಾಬಿಟ್ಟಿಯಾಗಿ ರಸ್ತೆಗೆ ಇಳಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ವಾಹನಗಳು ಜಪ್ತಿ ಆಗಲಿದ್ದು, ದಂಡ ಬೀಳಲಿದೆ.
ಇದನ್ನೂ ಓದಿರಿಬಿಎಸ್​ವೈ ಸರ್ಕಾರಕ್ಕೆ ವರ್ಷದ ಸಂಭ್ರಮ, ಸೋಮವಾರ ಮಹತ್ವದ ಸುದ್ದಿಗೋಷ್ಠಿ
ಭಾನುವಾರದ ರಜೆ ಗುಂಗಿನಲ್ಲಿ ಹೊರಗೆ ಬರುವ ಬದಲು ಜನರು ಮನೆಯಲ್ಲೇ ಸುರಕ್ಷಿತವಾಗಿ ಇರಬೇಕು. ವೀಕೆಂಡ್ ಲಾಕ್​ಡೌನ್​ ವೇಳೆ ಅಗತ್ಯ ವಸ್ತುಗಳ ಪೂರೈಕೆಗಷ್ಟೇ ಅವಕಾಶವಿದೆ. ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಹಾಲು, ದಿನಸಿ ಅಂಗಡಿ, ಹೋಟೆಲ್ (ಪಾರ್ಸಲ್ ಮಾತ್ರ), ತರಕಾರಿ, ಮಾಂಸದ ಅಂಗಡಿಗಳು ತೆರೆದಿರುತ್ತವೆ. ಕ್ಯಾಬ್​, ಕೆಎಸ್​ಆರ್​ಟಿಸಿ, ಬಿಎಂಟಿಸಿ, ಶಾಪಿಂಗ್​ ಮಾಲ್​, ಎಲ್ಲ ರೀತಿಯ ಅಂಗಡಿ, ಪ್ರವಾಸಿ ತಾಣ, ದೇವಸ್ಥಾನಗಳು ಬಂದ್​ ಆಗಲಿವೆ.
ಭಾನುವಾರ ಕಾಗಿರ್ಲ್​ ವಿಜಯ ದಿವಸ ಇರುವ ಕಾರಣ ಬೆಳಗ್ಗೆ 7.30ರಿಂದ ಮಧ್ಯಾಹ್ನ 12ರವರೆಗೆ ವಿಧಾನಸೌಧ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಾಪಸ್​ ಪಡೆದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಆದೇಶಿಸಿದ್ದಾರೆ. ಈ ಅವಧಿ ಬಿಟ್ಟು ಉಳಿದ ಸಮಯದಲ್ಲಿ ನಿರ್ಬಂಧ ಯಥಾವತ್ತಾಗಿ ಜಾರಿಯಲ್ಲಿ ಇರಲಿದೆ.
ತಾರಕಕ್ಕೇರಿದೆ ‘ಕುದುರೆ’ ವಿಷ್ಯ; ಜನರಿಂದ ತಿರಸ್ಕರಿಸಲ್ಪಟ್ಟ ಸಿ.ಪಿ.ಯೋಗೇಶ್ವರ್ ‘ಸತ್ತ ಕುದುರೆ’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 18 =
Remember me
