ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಯೋಜನೆಯ ಸಹಾಯಧನ ಮೊತ್ತ ಹೆಚ್ಚಳ ಹಾಗೂ ಹೊಸ ಮಾದರಿ ಹಾಸ್ಟೆಲ್ ನಿರ್ವಣಕ್ಕೆ ಸರ್ಕಾರ ಸಂಕಲ್ಪ ಮಾಡಿದೆ.
ವಿಜಯವಾಣಿ ಕಚೇರಿಯಲ್ಲಿ ಮಂಗಳವಾರ ವಿಶೇಷ ಸಂವಾದದಲ್ಲಿ ಪಾಲ್ಗೊಂಡ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಈ ವಿಷಯ ಪ್ರಕಟಿಸಿದರು. ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ಇಲ್ಲದ ಸ್ಥಳದಲ್ಲಿ ಕೊಳವೆಬಾವಿ ಕೊರೆಸಿ ಆ ಮೂಲಕ ಬಡ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂಬ ಗುರಿಯೊಂದಿಗೆ ಗಂಗಾ ಕಲ್ಯಾಣ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡ ನಿಗಮದಿಂದ ನೀಡುತ್ತಿರುವ ಸಹಾಯಧನ ಹೆಚ್ಚಿದೆ.
ಹಾಗಾಗಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 2 ಲಕ್ಷ ರೂ.ಗಳಿಂದ 2.50 ಲಕ್ಷ ರೂ.ಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ರಾಜ್ಯದ ಅನೇಕ ಕಡೆ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ಆಳ ಕೊಳವೆಬಾವಿ ಕೊರೆಯಿಸಲು ಸಹಾಯಧನ ಹೆಚ್ಚಿಸುವ ಅಗತ್ಯವಿದೆ. ಈ ವರ್ಷದಿಂದಲೇ ಈ ಸಹಾಯಧನ ಹೆಚ್ಚಳ ಮಾಡುವ ಪ್ರಯತ್ನ ನಡೆದಿದೆ ಎಂದು ಸಚಿವರು ಹೇಳಿದರು.
ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಗಡ ನಿಗಮದಿಂದ ಹೆಚ್ಚು ಸಹಾಯಧನ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ತಮ್ಮ ಇಲಾಖೆಯಿಂದ ನೀಡುವ ಸಹಾಯಧನದ ಮೊತ್ತ ಹೆಚ್ಚಿಸಿ ಫಲಾನುಭವಿಗಳಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದರು.
ಹಾಸ್ಟೆಲ್​ನಲ್ಲಿ ಮನೆಯ ಅನುಭವ:ಮನೆಯ ಹಿತಾನುಭವ ನೀಡುವ ರೀತಿಯಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ವಿುಸುವುದು ತಮ್ಮ ಉದ್ದೇಶ. ಈಗಾಗಲೇ ಈ ಕುರಿತು ಗಂಭೀರ ಚಿಂತನೆ ನಡೆದಿದೆ. ಇದು ವಿನೂತನ ಪರಿಕಲ್ಪನೆಯಾಗಿದ್ದು, ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ ಬಳಿಕ ಅದರ ಸಾಧಕ-ಬಾಧಕ ಪರಿಶೀಲಿಸಿ ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. ಈಗಿರುವ ಹಾಸ್ಟೆಲ್​ಗಳು ಹೈಟೆಕ್ ಆಗಿದ್ದರೂ ಕೂಡ ವಿದ್ಯಾರ್ಥಿಗಳಿಗೆ ಹಿತ ನೀಡುತ್ತಿಲ್ಲ. ಮನೆಯ ವಾತಾವರಣವನ್ನು ಸೃಷ್ಟಿಸುತ್ತಿಲ್ಲ. ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿದ್ದರೂ ಮನೆಯ ವಾತಾವರಣ ಇದ್ದರೆ ಆತ್ಮವಿಶ್ವಾಸ ಹೆಚ್ಚುವುದಲ್ಲದೆ, ಓದಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ತಾವು ಹೊಸ ಪ್ರಯೋಗ ಮಾಡುವ ಉದ್ದೇಶ ಹೊಂದಿದ್ದು, ಬಜೆಟ್​ನಲ್ಲಿ ಇಲಾಖೆಗೆ ನೀಡುವ ಅನುದಾನವನ್ನು ಆಧರಿಸಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ತಂಗಡಗಿ ತಿಳಿಸಿದರು.
ಉದ್ದೇಶಿತ ಹಾಸ್ಟೆಲ್​ಗಳಲ್ಲಿ ಪ್ರತಿ ರೂಮ್ೂ ಪ್ರತ್ಯೇಕ ಬಾತ್ ರೂಂ, ಟಾಯ್ಲೆಟ್​ಗಳನ್ನು ಅಳವಡಿಸಲಾಗುತ್ತದೆ. ಈ ಹಾಸ್ಟೆಲ್​ಗಳನ್ನು ಎಲ್ಲ ಕಡೆ ಒಂದೇ ಬಾರಿಗೆ ಆರಂಭಿಸಲು ಸಾಧ್ಯವಾಗುವುದಿಲ್ಲ. ಪ್ರಾಯೋಗಿಕವಾಗಿ ಕೊಪ್ಪಳ ಹಾಗೂ ಮತ್ತೊಂದು ಜಿಲ್ಲೆಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಇಲಾಖೆಯ ಸಾಲ, ಸಹಾಯಧನ ನೀಡಿಕೆಯಲ್ಲಿ ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ. ನೇರವಾಗಿ ಫಲಾನುಭವಿಗೆ ಸೌಲಭ್ಯ ತಲುಪಿಸುವ, ಕಚೇರಿಗೆ ಅಲೆದಾಟ ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸ ಪ್ರಯೋಗಕ್ಕೆ ಇಲಾಖೆ ಮುಂದಾಗಲಿದೆ.
| ಶಿವರಾಜ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ
ಕಾಲಕಾಲಕ್ಕೆ ವಿದ್ಯಾರ್ಥಿ ವೇತನ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 388 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವುದು ಬಾಕಿ ಇದೆ. ಈ ಬಾಕಿ ಪೂರ್ಣ ಪಾವತಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ವರ್ಷದ ವಿದ್ಯಾರ್ಥಿ ವೇತನದ ಜತೆ ಹಳೆಯ ಬಾಕಿಯನ್ನೂ ಸೇರಿಸಿ ಕೊಡಬೇಕಿದೆ. ಬಹುತೇಕ ಸಂದರ್ಭಗಳಲ್ಲಿ ವರ್ಷ, ಎರಡು ವರ್ಷವಾದರೂ ಮಕ್ಕಳಿಗೆ ಸ್ಕಾಲರ್​ಶಿಪ್ ತಲುಪುತ್ತಿಲ್ಲ. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಾಕುವ ಹೊಸ ಪ್ರಯೋಗದ ಅವಶ್ಯಕತೆ ಇದೆ. ಈ ಬದಲಾವಣೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು.
ಸಾಲದ ಸಬ್ಸಿಡಿ ಮೊತ್ತ ಹೆಚ್ಚಳ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿ ಬರುವ ನಿಗಮದಿಂದ ಕೊಡುವ ಸಾಲ ಮತ್ತು ಸಹಾಯಧನದ ಮೊತ್ತವನ್ನು ಹೆಚ್ಚಿಸುವ ಅಗತ್ಯವಿದೆ. ಫಲಾನುಭವಿಗಳ ಪ್ರಮಾಣ ಹೆಚ್ಚಿಸಿ ಸಣ್ಣ ಮೊತ್ತ ನೀಡಿದರೆ ಅದರಿಂದ ಏನೂ ಪ್ರಯೋಜನವಾಗುವುದಿಲ್ಲ. ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಿ ತುಸು ದೊಡ್ಡ ಮೊತ್ತ ನೀಡಿದರೆ ಉದ್ಯಮ ಆರಂಭಿಸಲು, ಉದ್ಯೋಗ ಕೈಗೊಳ್ಳಲು ಅನುಕೂಲವಾಗುತ್ತದೆ. ಆಗ ಸರ್ಕಾರದ ಹಣ ಸದ್ವಿನಿಯೋಗವಾಗುತ್ತದೆ. ಕೇವಲ 50-60 ಸಾವಿರ ರೂ. ಕೊಡುವ ಬದಲು 2.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳವರೆಗೆ ಕೊಟ್ಟರೆ ಹೆಚ್ಚಿನ ಪ್ರಯೋಜನವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ ಎಂದು ಶಿವರಾಜ ತಂಗಡಗಿ ಹೇಳಿದರು.
ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 1 =
Remember me
