ಬೆಂಗಳೂರು:ಸ್ಯಾಂಡಲ್​ವುಡ್​ ಸ್ಟಾರ್​ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದು, ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆಯಲ್ಲಿ ದರ್ಶನ್​ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್​ರನ್ನು ಬಂಧಿಸಿದ್ದಾರೆ. ಇದಲ್ಲದೆ, ಒಳಸಂಚು ನಡೆಸಿದ ಆರೋಪದ ಮೇಲೆ ಪವಿತ್ರಾ ಗೌಡಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ನಾನು ಮಾಡಿದ್ದು ತಪ್ಪು! ಹರ್ಭಜನ್​ ಸಿಂಗ್​ ಬಳಿ ಕ್ಷಮೆಯಾಚಿಸಿದ ಪಾಕ್​ ಮಾಜಿ ಆಟಗಾರ ಅಕ್ಮಲ್​
ಪ್ರಕರಣದ ಆರೋಪಿ ವಿನಯ್ ಮಾವ ಜಯಣ್ಣ ಮಾಲೀಕತ್ವದ ಶೆಡ್​ನಲ್ಲಿ ಜೂನ್​.08ರ ರಾತ್ರಿ ಮೃತ ರೇಣುಕಾಸ್ವಾಮಿಗೆ ಇತರೆ ವಸ್ತುಗಳಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ರೇಣುಕಾರ ಬೆನ್ನು, ಕೈ ಮತ್ತು ಮರ್ಮಾಂಗಕ್ಕೆ ಬಲವಾಗಿ ಪೆಟ್ಟು ಬಿದ್ದಿರುವುದು ಇದೀಗ ಬೆಳಕಿಗೆ ಬಂದಿದೆ. ಕಾದ ಕಬ್ಬಿಣದ ಸಲಾಕೆಯಿಂದ ಕ್ರೂರವಾಗಿ ರೇಣುಕಾಸ್ವಾಮಿ ಕೈ ಸುಟ್ಟಿರುವುದು ಗೊತ್ತಾಗಿದೆ. ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಕಾಮಾಕ್ಷಿ ಪಾಳ್ಯದ ರಾಜ ಕಾಲುವೆ ಬಳಿ ಮೃತದೇಹ ಎಸೆದು, ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ.
ಜೂ.09ರ ಬೆಳಗ್ಗೆ 08 ಗಂಟೆ ಸುಮಾರಿಗೆ ರೇಣುಕಾಸ್ವಾಮಿ ಅವರ ಮೃತದೇಹವನ್ನು ಬೀದಿ ನಾಯಿಗಳು ಎಳೆದಾಡುವಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಬೆನ್ನಲ್ಲೇ ಬೆಂಗಳೂರಿನ ಪೊಲೀಸರು ಸ್ಥಳಕ್ಕೆ ಬಂದು, ಮೃತದೇಹವನ್ನು ವಶಕ್ಕೆ ಪಡೆದು, ಆರೋಪಿಗಳನ್ನು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿ ಒಟ್ಟು 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ನೀಡಿದ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ…

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:16 + three =
Remember me
