ಬೆಂಗಳೂರುಜಾಗತಿಕವಾಗಿ ಹವಾಮಾನ ಬಿಕ್ಕಟ್ಟು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ‘ಮಿಷನ್ ಲೈಫ್ ಎಂಬ ಹೆಸರಿನಲ್ಲಿ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಜಾಗೃತಿ ಮೂಡಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕವು ಸೂಚನೆ ನೀಡಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನದ ಮೇರೆಗೆ ಸೂಚಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ದೇಶಾದ್ಯಂತ ತೀವ್ರತರವಾದ ಶಾಖದ ಅಲೆಗಳು ಮತ್ತು ಉಲ್ಬಣಗೊಳ್ಳುತ್ತಿರುವ ಹವಾಮಾನ ಬಿಕ್ಕಟ್ಟುಗಳಿಂದ ಭೂಮಿಯನ್ನು ರಕ್ಷಿಸಲು ಸಜ್ಜುಗೊಳ್ಳಬೇಕಿದೆ. ಪ್ರಸ್ತುತ ದಿನಗಳಲ್ಲಿ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಉತ್ತಮ, ಯಶಸ್ವಿ, ನವೀನ, ಹೊಂದಿಕೊಳ್ಳುವ ಮತ್ತು ಉತ್ಪಾದಕ ಮಾನವರಾಗಲು ಕೆಲವು ವಿಷಯಗಳು, ಕೌಶಲಗಳು ಮತ್ತು ಸಾಮರ್ಥ್ಯಗಳನ್ನು ಎಲ್ಲ ವಿದ್ಯಾರ್ಥಿಗಳು ಕಲಿಯಬೇಕು ಎಂದು ಹೇಳಿದ್ದಾರೆ.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ನೈರ್ಮಲ್ಯ, ಪರಿಸರ, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿಯು ತಿಳಿಸುತ್ತದೆ. ಅದರಂತೆ ‘ಮಿಷನ್ ಲೈಪ್’ ಹೆಸರಿನಲ್ಲಿ ಪ್ರತಿ ವಾರ ಪರಿಸರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲಾ ಹಂತದಲ್ಲಿ ಉಪ ನಿರ್ದೇಶಕರು ಶಾಲಾ ಕಾಲೇಜುಗಳಲ್ಲಿ ಇಕೋ ಕ್ಲಬ್ ಕಾರ್ಯಕ್ರಮದಡಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸೂಚಿಸಬೇಕು. ಕಾರ್ಯಕ್ರಮ ಅನುಷ್ಠಾನಗೊಳಿಸಿದ ಬಗ್ಗೆ ಶಾಲೆಗಳಿಂದ ೊಟೋ ಸಹಿತ ಮಾಹಿತಿಯನ್ನು ಸಂಗ್ರಹಿಸಿ ಕ್ರೋಢೀಕರಿಸಿ ರಾಜ್ಯ ಕಚೇರಿಗೆ ಇ-ಮೇಲ್ ಮೂಲಕ ಕಳಿಸುವಂತೆ ತಿಳಿಸಿದ್ದಾರೆ.
ಮಿಷನ್ ಲೈಫ್ ಥೀಮ್‌ಗಳು:ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವುದುಸುಸ್ಥಿರ ಆಹಾರ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವುದುಇ-ತ್ಯಾಜ್ಯ ಹಾಗೂ ಸಾಮಾನ್ಯ ತ್ಯಾಜ್ಯವನ್ನು ಕಡಿಮೆ ಮಾಡುವುದುಶಕ್ತಿ ಮತ್ತು ನೀರನ್ನು ಉಳಿತಾಯ ಮಾಡುವುದುಏಕ ಬಳಕೆ ಪ್ಲಾಸ್ಟಿಕ್ ಬಳಸದಿರುವುದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
