ಬೆಂಗಳೂರು:ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ, ಪ್ರತ್ಯೇಕ ಸಭೆ ನಡೆಸುವುದರೊಂದಿಗೆ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಇಂದು ಉಚ್ಛಾಟನೆ ಮಾಡಲಾಗಿದೆ.
ಇಂದು ನಡೆದ ಜೆಡಿಎಸ್​ ಕೋರ್ ಕಮಿಟಿ ಸಭೆಯಲ್ಲಿ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಜೆಡಿಎಸ್​ ಪಕ್ಷದ ರಾಜ್ಯ ಘಟಕ‌ವನ್ನೇ ವಿಸರ್ಜಿಸಿ ಹೊಸ ಅಡಾಕ್​ ಕಮಿಟಿ ರಚನೆ ಮಾಡಿದ ಹಿನ್ನೆಲೆಯಲ್ಲಿ ಇಬ್ರಾಹಿಂ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.
ಜೆಡಿಎಸ್​-ಬಿಜೆಪಿ ಮೈತ್ರಿ ಘೋಷಣೆಯಾದ ಬಳಿಕ ಇಬ್ರಾಹಿಂ ನೀಡಿದ್ದ ಹೇಳಿಕೆಗಳು ಪಕ್ಷಕ್ಕೆ ಇರುಸು-ಮುರುಸು ತಂದಿತ್ತು. ತಮ್ಮ ಬೆಂಬಲಿಗರ ಸಭೆಯನ್ನು ನಡೆಸಿ, ನಮ್ಮದೇ ಒರಿಜಿನಲ್​ ಜೆಡಿಎಸ್​ ಎಂದಿದ್ದರು. ರಾಜ್ಯಾಧ್ಯಕ್ಷನಾಗಿದ್ದರೂ ನನ್ನ ಗಮನಕ್ಕೆ ತರದೇ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದರು. ಇಂಡಿಯಾ ಒಕ್ಕೂಟಕ್ಕೆ ನನ್ನ ಬೆಂಬಲ ಎಂದು ನೇರವಾಗಿಯೇ ಹೇಳಿಕೆ ನೀಡಿದ್ದರು. ಇದರ ನಡುವೆ ಎಚ್​ಡಿಕೆ ಮತ್ತು ನಿಖಿಲ್​ ಕುಮಾಸ್ವಾಮಿ ಅವರನ್ನು ಇಬ್ರಾಹಿಂ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ ಎಂಬ ಪತ್ರವೂ ವೈರಲ್​ ಆಗಿತ್ತು. ಆದರೆ, ಅದು ನಕಲಿ ಪತ್ರ ಎಂದು ಹೇಳಿ ಸ್ವತಃ ಇಬ್ರಾಹಿಂ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದರು.
ಇದನ್ನೂ ಓದಿ:ಹಮಾಸ್ ಕಮಾಂಡರ್‌ನ ಆಡಿಯೋ, ಲೈವ್ ಫೂಟೇಜ್… ಗಾಜಾ ಆಸ್ಪತ್ರೆ ದಾಳಿ ಸಂಬಂಧಿಸಿದಂತೆ 5 ಪುರಾವೆಗಳನ್ನು ಪ್ರಸ್ತುತಪಡಿಸಿದ ಇಸ್ರೇಲ್
ಈ ಎಲ್ಲ ಬೆಳವಣಿಗೆಗಳ ಬಳಿಕ ಇಂದು ನಡೆದ ಕೋರ್​ ಕಮಿಯ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ. ದೇವೇಗೌಡ ಅವರು ಎಲ್ಲರ ಒಪ್ಪಿಗೆಯನ್ನು ಪಡೆದು ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್​ಡಿಡಿ, ಹಿಂದಿನ ಅಧ್ಯಕ್ಷರು ಏನು ಹೇಳಿದ್ದಾರೋ ಅದನ್ನು ನಾನಿಲ್ಲಿ ಪ್ರಸ್ತಾಪ ಮಾಡುವುದಿಲ್ಲ. ನಾವು ಬಿಜೆಪಿ ಜತೆ ಹೋಗುವುದಕ್ಕೆ ಕಾರಣ ಯಾರು? ಎಂದು ಪ್ರಶ್ನಿಸುವ ಮೂಲಕ ಇಬ್ರಾಹಿಂಗೆ ಟಾಂಗ್​ ಕೊಟ್ಟರು. ಈಗಲೂ ಸಾಕಷ್ಟು ಯುವ ಮುಸ್ಲಿಂ ಮುಖಂಡರು ನಮ್ಮನ್ನು ಬೆಂಬಲಿಸುತ್ತಿದ್ದಾರೆ ಎಂದರು.
ಇಬ್ರಾಹಿಂಗಿರುವ ಮುಂದಿನ‌ ಮಾರ್ಗಗಳೇನು?ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಗೊಂಡಿರುವ ಸಿಎಂ ಇಬ್ರಾಹಿಂ ಮುಂದಿರುವ ಮಾರ್ಗಗಳೇನು ಎಂಬ ಪ್ರಶ್ನೆ ಇದೀಗ ಮೂಡಿದೆ. ಮೊದಲನೆಯದಾಗಿ ಪಕ್ಷದ ಸದಸ್ಯತ್ವವನ್ನು ಒಪ್ಪಿಕೊಂಡು‌ ಪಕ್ಷದಲ್ಲೇ ಮುಂದುವರಿಯಬಹುದು ಅಥವಾ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರಬರಬಹುದು. ಒಂದು ವೇಳೆ ಪಕ್ಷದಿಂದ ಹೊರಬಂದರೆ ಬೇರೆ ಪಕ್ಷ ಸೇರಲು ಅವರಿಗೆ ಅವಕಾಶ ಸೃಷ್ಟಿಯಾಗುತ್ತದೆ. ಮರಳಿ ಕಾಂಗ್ರೆಸ್​ ಸೇರಿದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ, ಈಗಾಗಲೇ ಇಂಡಿಯಾ ಒಕ್ಕೂಟದ ಪರ ಇಬ್ರಾಹಿಂ ಬ್ಯಾಟ್​ ಬೀಸಿದ್ದಾರೆ. ಇದ್ಯಾವುದನ್ನು ಮಾಡದೇ ರಾಜಕೀಯ ಸಾಕು ಅಂತ ರಾಜಕೀಯ ನಿವೃತ್ತಿಯನ್ನೂ ಘೋಷಿಸಬಹುದು. ಹೀಗಾಗಿ ಇಬ್ರಾಹಿಂ ಅವರು ಸದ್ಯದ ಬೆಳವಣಿಗೆ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ? ಅವರು ಮುಂದಿನ ನಡೆ ಹೇಗಿರಲಿದೆ ಎಂಬ ಕುತೂಹಲ ಇದೀಗ ಎಲ್ಲರಲ್ಲೂ ಮೂಡಿದೆ.
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರಿದ್ದ ಇಬ್ರಾಹಿಂ ಅವರಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಲಾಗಿತ್ತು.
ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಎಚ್​.ಡಿ.ಕುಮಾರಸ್ವಾಮಿ ನೇಮಕ: ಸಿಎಂ ಇಬ್ರಾಹಿಂ ಉಚ್ಛಾಟನೆ

ಡಿಸಿಎಂ ಡಿಕೆಶಿಗೆ ಬಿಗ್​ ಶಾಕ್​: ಸಿಬಿಐ ದಾಖಲಿಸಿ FIR​ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​

ಉಳಿತಾಯ ಹೆಚ್ಚಿಸಲು 14 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ನೋಕಿಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
