ಬೆಂಗಳೂರು:ನಾಮಫಲಕದಲ್ಲಿ ಶೇ.60 ಕನ್ನಡ ಬಳಸಿದರೆ ಸಮಸ್ಯೆ ಏನು ಎಂದು ವಾಣಿಜ್ಯ ಸಂಸ್ಥೆಗಳನ್ನು ಪ್ರಶ್ನಿಸಿರುವ ಹೈಕೋರ್ಟ್, ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ದಿಢೀರ್​ ಮುಚ್ಚದಂತೆ ಮಧ್ಯಂತರ ಆದೇಶ ನೀಡಿದೆ.
ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಜಾರಿ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ರೀಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟನ್ ಕಂಪನಿ ಹಾಗೂ ಪಿವಿಆರ್ ಐನಾಕ್ಸ್ ಮತ್ತಿತರ ಕಂಪನಿಗಳು ಸಲ್ಲಿಸಿರುವ ಹಲವು ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಮನು ಕುಲಕರ್ಣಿ 2024ರ ಫೆ.28ರಂದು ಸರ್ಕಾರ ಸುತ್ತೋಲೆ ಹೊರಡಿಸಿ, ನಾಮಫಲಕಗಳಲ್ಲಿ ಶೇ.60 ಬಳಸದ ವಾಣಿಜ್ಯ ಸಂಸ್ಥೆಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಹೇಳಿದೆ. ಇದು ಅಸಮರ್ಥನೀಯವಾಗಿದ್ದು, ಸುತ್ತೋಲೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು. ಈ ವೇಳೆ ನ್ಯಾಯಮೂರ್ತಿ, ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು. ಶೇ.60 ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು,ಕಾಯ್ದೆ ಜಾರಿ ಸಮರ್ಪಕವಾಗಿಲ್ಲ. ಜಾರಿ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ವಾದ ಮಂಡಿಸಿದರು.
ಅಷ್ಟೆ ಅಲ್ಲದೆ, ಸರ್ಕಾರ ಮತ್ತು ಬಿಬಿಎಂಪಿ ನೀಡಿದ್ದ ಸಮಯಾವಕಾಶ ಸಾಕಾಗಲಿಲ್ಲ. ಒಂದೇ ಸಲ ಎಲ್ಲ ವಾಣಿಜ್ಯ ಸಂಸ್ಥೆಗಳು ಫಲಕ ಬದಲಾವಣೆಗೆ ಮುಂದಾಗಿರುವುದರಿಂದ ನಾಮಫಲಕಗಳು ಸಕಾಲದಲ್ಲಿ ಲಭ್ಯವಾಗುತ್ತಿಲ್ಲ. ಆದರೆ, ಸರ್ಕಾರ ಮತ್ತು ಬಿಬಿಎಂಪಿ ಸೀಲ್​ಡೌನ್ ಮಾಡುತ್ತೇವೆ ಎನ್ನುವುದು ಕಠಿಣ ಕ್ರಮವಾಗಿದೆ. ಇದರಿಂದ ವ್ಯಾಪಾರ-ವಹಿವಾಟಿಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.
ಸುತ್ತೋಲೆ ಅನುಸಾರ ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಕಾಯ್ದೆ ಯಾವ ದಿನದಿಂದ ಜಾರಿಗೆ ಬಂದಿದೆ, ಯಾವ ದಿನ ಸರ್ಕಾರದ ರಾಜ್ಯಪತ್ರದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಆ ಕುರಿತ ದಾಖಲೆಗಳನ್ನು ಒದಗಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತು.
ನಿಮಗೇನು ತೊಂದರೆ?ಶೇ.60 ಕನ್ನಡ ಬಳಕೆಗೆ ನಿಯಮ ರೂಪಿಸಲಾಗಿದೆ. ಕಾಯ್ದೆಯ ನಿಯಮಗಳನ್ನು ನ್ಯಾಯಾಲಯ ಪರಿಶೀಲಿಸಿ ಉತ್ತರ ನೀಡಲಿದೆ. ಕಾಯ್ದೆಯ ಬಗೆಗಿನ ಎಲ್ಲ ಅಂಶಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿದೆ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದನ್ನು ನ್ಯಾಯಾಲಯ ಒಪ್ಪುವುದಿಲ್ಲ. ಆದರೆ, ನಾಮಫಲಕದಲ್ಲಿ ಕನ್ನಡವನ್ನು ದೊಡ್ಡದಾಗಿ ಬಳಸಿದರೆ ಯಾವ ಸಮಸ್ಯೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ. ಹೆಸರುಗಳನ್ನು ಕನ್ನಡಕ್ಕೆ ಅನುವಾದ ಮಾಡುವಂತೆ ಹೇಳುತ್ತಿಲ್ಲ. ಸಂಸ್ಥೆಯಲ್ಲಿ ಪ್ರತಿ ಉದೊ್ಯೕಗಿಯೂ ಕನ್ನಡಿಗನಾಗಿರಬೆಕು ಎಂದು ನಿಯಮ ಹೇರುತ್ತಿಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವಂತಷ್ಟೇ ಹೇಳುತ್ತಿದೆ. ಅದರಲ್ಲಿ ತಪ್ಪೇನಿದೆ? ಎಂದು ಅರ್ಜಿದಾರರ ನಡೆಯನ್ನು ನ್ಯಾಯಮೂರ್ತಿಗಳು ತೀವ್ರವಾಗಿ ಆಕ್ಷೇಪಿಸಿದರು.
ಕರ್ಮದ ಫಲ ಸಿಲ್ಕ್​ ಸ್ಮಿತಾ ಸಾವಿಗೆ ಕಾರಣವಾಯ್ತಾ? ಅತಿದೊಡ್ಡ ರಹಸ್ಯ ಬಯಲು ಮಾಡಿದ ಹಿರಿಯ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
