ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ‌ಕೋರ್ಟ್ ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12 ರ ನಂತರ ನೀರು ತಮಿಳುನಾಡಿಗೆ ಬಿಡಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಮುಂದೆ ಅಫಿಡೆವಿಟ್ ಹಾಕಿದೆ‌. ಅದಕ್ಕೆ ತಾವು ಬದ್ಧರಾಗಿರಬೇಕಲ್ಲ. ಸರ್ಕಾರದ ಅಫಿಡೆವಿಟ್ ಅಂದರೆ ಸುಮ್ಮನೆ ಅಲ್ಲ. ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು‌ ಎಂದು ಅಭಿಪ್ರಾಯಪಟ್ಟರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ‌. ರಾಜ್ಯದ ಹಿತ ದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ಸಿದ್ದವಿಲ್ಲ ಎಂದರು.
ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನಿಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೇವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − eight =
Remember me
