ಬೆಂಗಳೂರು:ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಪ್ರತ್ಯೇಕವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.
ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ” ಎಂದು ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ” ಎಂದರು.
ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಕೇಳಿದಾಗ, “ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರು.
ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಸೂರಜ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಕೇಳಿದಾಗ, “ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ” ಎಂದರು.
ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.
ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ.
ಬಿಬಿಎಂಪಿ ಚುನಾವಣೆ ಮಾಡುತ್ತೀರಾ ಎದು ಕೇಳಿದಾಗ, “ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದು ಡಿ.ಕೆ.ಶಿವಕುಮಾರ್ ಉತ್ತರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
