ದಾವಣಗೆರೆ:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುರಿತು ಆಗಾಗ ವಿಷಯ ಮುನ್ನೆಲೆಗೆ ಬರುತ್ತಿರುವುದು ಹೊಸದೇನಲ್ಲ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರೇ ನಾಯಕತ್ವ ಬದಲಾವಣೆ ಸಂಬಂಧ ಮಾತನಾಡಿದ್ದಾರೆ.
ಹೌದು.. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್ ಕಟೀಲ್ ಅವರು ನಾಯಕತ್ವ ಬದಲಾವಣೆ ವಿಷಯ ಸಂಬಂಧ ಮಾತನಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಅವರ ಭೇಟಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಾಯಕತ್ವ ಬದಲಾವಣೆ ವಿಷಯ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ.
ನಾನು ಯಡಿಯೂರಪ್ಪ ಹಾಗೂ ಸಂತೋಷ್​ ಜೀ ಅವರನ್ನು ಭೇಟಿಯಾಗಿದ್ದರಲ್ಲಿ ವಿಶೇಷವೇನಿಲ್ಲ ಎಂಬುದಾಗಿ ಹೇಳಿದ ನಳಿನ್​, ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬ ಪ್ರಶ್ನೆಗೆ ಕಾದು ನೋಡಿ ಎಂದಷ್ಟೇ ಉತ್ತರಿಸಿದರು. ವೀರಶೈವ-ಲಿಂಗಾಯತರ ಬೇಡಿಕೆ ಹಿನ್ನೆಲೆಯಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಸಿಎಂ ಎಲ್ಲ ಸಮುದಾಯಕ್ಕೂ ನ್ಯಾಯ ಕೊಡುತ್ತಿದ್ದಾರೆ ಎಂದೂ ಹೇಳಿದರು.
ಇನ್ನು ನಾಯಕತ್ವ ಬದಲಾವಣೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್​, ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಬಂದ್ ವಿಚಾರದಲ್ಲಿ ಸರ್ಕಾರ ತನ್ನ ಕೆಲಸ ಮಾಡುತ್ತದೆ ಎಂದು ಚುಟುಕಾಗಿ ಉತ್ತರಿಸಿದರು.
86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 11 =
Remember me
