ಬೆಂಗಳೂರು:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದ್ದು, ರಾಜ್ಯ ಸರ್ಕಾರ ಮತ್ತು ರಾಜಭವನದ ಮಧ್ಯೆ ಸಂಘರ್ಷ ಏರ್ಪಟ್ಟಿದೆ.  ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ಮುಳುವಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದ್ದು, ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಈ ಪ್ರಕರಣ ಮುಂದೆ ಯಾವ ರೀತಿಯ ತಿರುವು ಪಡೆದುಕೊಳ್ಳಬಹುದು ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿದ್ದು, ಸಾರ್ವಜನಿಕರು ಚರ್ಚೆಯಲ್ಲಿ ಮಗ್ನರಾಗಿದ್ದಾರೆ.
ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಮಾಹಿತಿ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ರಾಜ್ಯದಾದ್ಯಂತ ಪ್ರತಿಭಟನೆ ಆರಂಭಿಸಿದ್ದಾರೆ. ಸಂಪುಟದ ಎಲ್ಲ ಸದಸ್ಯರು ಮತ್ತು ಕಾಂಗ್ರೆಸ್‌ ನಾಯಕರು ಮುಖ್ಯಮಂತ್ರಿಯವರ ಬೆನ್ನಿಗೆ ನಿಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ಹಾಗೂ ಜೆಡಿಎಸ್‌ ಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸಿವೆ. ಆದರೆ, ಇದಕ್ಕೆಲ್ಲಾ ಸೆಡ್ಡು ಹೊಡೆದಿರುವ ಸಿಎಂ ಸಿದ್ದರಾಮಯ್ಯ ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಆದೇಶಿಸಿದ ರಾಜ್ಯಪಾಲರಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಇತ್ತ ಪ್ರಾಸಿಕ್ಯೂಷನ್​ಗೆ ಆದೇಶ ನೀಡುತ್ತಿದ್ದಂತೆ ಎಚ್ಚೆತ್ತಿರುವ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಲು ಸಜ್ಜಾಗಿದ್ದು, ಕಾನೂನು ಹೋರಾಟದ ಮೂಲಕ ಉತ್ತರ ಕೊಡಲು ಮುಂದಾಗಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯ ಆಗಸ್ಟ್‌ 20ರಂದು ಅದೇಶ ಹೊರಡಿಸಲಿದೆ.ಅಬ್ರಹಾಂ ಅವರ ಅರ್ಜಿಯ ವಿಚಾರಣೆ ಕುರಿತು ಆಗಸ್ಟ್‌ 21ರಂದು ವಿಚಾರಣೆ ನಡೆಯಲಿದೆ. ಒಂದು ವೇಳೆ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  FIR ದಾಖಲಾಗುತ್ತದೆ.
ಇದನ್ನೂ ಓದಿ:ನನ್ನ ಸಿನಿಮಾ ಕಥೆಗಳಿಗೆ ಊರು-ಯಕ್ಷಗಾನ ಪ್ರೇರಣೆ: ರಿಷಬ್​​ ಶೆಟ್ಟಿ
ಮುಡಾ ಅಕ್ರಮ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮೋದನೆ ನೀಡಿದ ಬಳಿಕ ದೂರುದಾರರ ದೂರಿಗೆ ತೂಕ ಬಂದಿದ್ದು, ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುವ ಅಧಿಕಾರವಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆಯೂ ಹಲವಾರು ಆಯ್ಕೆಗಳಿವೆ. ಮೇಲ್ನೋಟಕ್ಕೆ ತನಿಖೆಗೆ ಅರ್ಹ ಎಂದು ಕಂಡು ಬಂದರೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅದೇಶ ನೀಡಬಹುದು. ನ್ಯಾಯಾಲಯದ ಮುಂದೆ ಹಾಜರಾಗಲು ಮುಖ್ಯಮಂತ್ರಿಗಳಿಗೆ ಸಮನ್ಸ್‌ ನೀಡಬಹುದು. ಈ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರಕರಣವನ್ನು ತಿರಸ್ಕರಿಸಬಹುದಾಗಿದೆ.
ಒಂದು ವೇಳೆ ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಅವರು ಸುಪ್ರೀಂ ಕೋರ್ಟ್​ ಮೆ್ಟಿಲೇರುವುದು ಪಕ್ಕಾ ಆಗಿದೆ. ಒಂದು ವೇಳೆ ಸುಪ್ರೀಂ ಕೋರ್ಟ್​ ಕೂಡ ಪ್ರಾಸಿಕ್ಯೂಷನ್​ಗೆ ಅನುಮತಿಸಿದ್ದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಭವಿಷ್ಯ ಡೋಲಾಯಮಾನವಾಗಲಿದೆ. ಆ ಬಳಿಕ ನಡೆಯುವ ರಾಜಕೀಯ ಬೆಳವಣಿಗೆಗೆಳಿಗೆ ರಾಜ್ಯ ಸಾಕ್ಷಿಯಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + ten =
Remember me
