ಬೆಂಗಳೂರು:ಈ ಬಾರಿ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ರಾಜ್ಯಕ್ಕೆ ಯಾವಾಗ ಪ್ರವೇಶಿಸಲಿದೆ ಎಂಬ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್​ ಜೂ. 6 ಅಥವಾ ಜೂ. 7ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ವಾಡಿಕೆಯಂತೆ ಜೂ. 1 ಅಥವಾ ಜೂ. 2ರಂದು ಕೇರಳಕ್ಕೆ ಆಗಮಿಸುವ ಮಾರುತಗಳು ಮೂರ್ನಾಲ್ಕು ದಿನಗಳ ಬಳಿಕ ಕರ್ನಾಟಕಕ್ಕೆ ಪ್ರವೇಶಿಸುತ್ತವೆ. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು ಹಾಗೂ ಮೋಕಾ ಚಂಡಮಾರುತವೂ ತೇವಾಂಶ ಭರಿತ ಮೋಡಗಳನ್ನು ಸೆಳೆದಿದ್ದೂ ಸೇರಿ ಇತರೆ ಕಾರಣಗಳಿಂದ ವಾಡಿಕೆಯಂತೆ ಆಗಮನವಾಗಬೇಕಿದ್ದ ಮಾರುತಗಳು ಮೇಲೆ ಪರಿಣಾಮ ಬೀರಿದೆ.
ಇದನ್ನೂ ಓದಿ:ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್
ಸೋಮವಾರ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮುಂಗಾರು ಸಂಬಂಧ ಪೂರಕ ಹವಾಗುಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಜೂ. 4 ಅಥವಾ ಜೂ. 5ರಂದು ಕೇರಳಕ್ಕೆ ಮಾರುತಗಳು ಪ್ರವೇಶಿಸಲಿವೆ. ಒಂದು ವೇಳೆ ಮಾರುತಗಳು ಪ್ರಬಲವಾದರೆ ಒಂದೆರೆಡು ದಿನಗಳಲ್ಲಿ ಕರ್ನಾಟಕಕ್ಕೆ ಆಗಮಿಸಲಿವೆ.
ಮಳೆ ಚುರುಕು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಸೋಮವಾರ ಬೆಂಗಳೂರು ನಗರ, ರಾಮನಗರ, ಹಾವೇರಿ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿದಿದೆ.
ಇದನ್ನೂ ಓದಿ:ಒಂಟಿಯಾಗಿದ್ದ, 3 ಮಕ್ಕಳ ವೃದ್ಧತಾಯಿ ಕೋಣೆಯಲ್ಲಿ ಶವವಾಗಿ ಪತ್ತೆ!; ಪ್ರಕರಣ ಸಂಬಂಧ 5 ತಂಡಗಳ ರಚನೆ
ಹಾಸನ,ಕೊಡಗು, ಚಿಕ್ಕಮಗಳೂರಿನಲ್ಲಿ ಮೇ 31ರಂದು, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಜೂ 1ರಂದು ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಇದನ್ನೂ ಓದಿ:ಯಾವ ಸಮಯದಲ್ಲಿ ವ್ಯಾಯಾಮ ಒಳ್ಳೆಯದು?; ಈ ಅವಧಿಯೇ ಸೂಕ್ತವಂತೆ!
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಮುಂದಿನ 3 ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ.
ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
