ಬೆಂಗಳೂರು:ಬಹು ನಿರೀಕ್ಷಿತ 2021ರ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಕುರಿತು ಈಗಾಗಲೇ ಬಹುತೇಕ ಒಂದು ನಿರ್ಧಾರ ತಳೆಯಲಾಗಿದೆ. ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಸಚಿವ ಸಂಪುಟ ಬದಲಾಗಿದ್ದು, ಸಚಿವರ ನೇಮಕವಾಗಬೇಕಿದೆ.
ಈ ಮಧ್ಯೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಮಂಡಳಿ ಸದಸ್ಯರ ಸಭೆ ನಡೆಸಿದ್ದು, ಈ ಸಭೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಈ ಸಭೆಯ ನಡಾವಳಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದು, ಅವರಿಂದ ಅನುಮತಿಗಾಗಿ ಮಂಡಳಿಯು ಕಾಯುತ್ತಿದ್ದು, ಬಹುಶಃ ಒಂದೆರಡು ದಿನಗಳಲ್ಲಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ.
ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲೇ ಮುಗಿಸಲಾಗಿತ್ತು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ.
ನನ್ನ ಪತಿ ಹಲವು ವಿದ್ಯಾರ್ಥಿನಿಯರನ್ನು ಬಳಸಿಕೊಂಡಿದ್ದಾರೆ; ಪ್ರಾಧ್ಯಾಪಕನ ಕಾಮಪುರಾಣವನ್ನು ಬಿಚ್ಚಿಟ್ಟ ಪತ್ನಿ

ಕ್ಷೇತ್ರದ ಶಾಸಕರು ಸಚಿವರಾದ ದಿನದಂದೇ ನಗರಸಭೆ ಆಯುಕ್ತರ ಉರುಳು ಸೇವೆ; ವೈರಲ್ ಆಯ್ತು ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
