ಬೆಂಗಳೂರು:ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಮೈಸೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಕೆಂಗೇರಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ರೇಟ್‌ ಕಾರ್ಡ್‌, ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಪಿಎಸ್‌‍ಐ ಪರಶುರಾಮ್ ಸಾವು: ಸಿ.ಟಿ.ರವಿ
ಪಾದಯಾತ್ರೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಮಾತ್ರ ಇಲ್ಲ. ನಾಡಿನ ಜನರ ಅಭಿಪ್ರಾಯ ಇಲ್ಲಿದೆ. ನಿನ್ನೆ ಬಿಡದಿಯಲ್ಲಿ ಕಾಂಗ್ರೆಸ್​ನವರು ನನಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಅವರ ಪ್ರಶ್ನೆಗಳಿಗೆ ಬಿಡದಿ, ರಾಮನಗರದಲ್ಲಿ ಉತ್ತರ ಕೊಡುತ್ತೇನೆ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.ದೇವೆಗೌಡರು ರಾಮನಗರಕ್ಕೆ ಬಂದ ನಂತರ ಎಷ್ಟು ಆಸ್ತಿ ಮಾಡಿದ್ದಾರೆ. ಈ ರಾಜ್ಯದ ಉಪ ಮುಖ್ಯಮಂತ್ರಿ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಕೊಡುತ್ತೇವೆ. ನಾವೂ ಕೂಡ ಅವರದ್ದು ಎಷ್ಟಿದೆ ಆಸ್ತಿ ಎನ್ನುವುದನ್ನು ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಆಸ್ತಿ ಬಗ್ಗೆ ಹೇಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೇಳಿದ್ದಾರೆ. ಅವರ ವಿರುದ್ಧ ದಾಖಲೆ ತೆಗೆದುಕೊಂಡು ಹೋಗಿ ಕೊಟ್ಟಿದ್ದೇನಂತೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮನ್ನು ಬಂಧಿಸಲು ದೆಹಲಿಯಿಂದ ಬರುತ್ತಾರೆ. ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ ಅಂತ ಹೇಳಿಕೊಂಡಿದ್ದಾರೆ. ರಾಜಕಾರಣಕ್ಕೆ ಬರುವ ಮೊದಲು ಅವರ ವ್ಯವಹಾರ ಏನಿತ್ತು ಎಂಬುದನ್ನು ಅವರ ಗುರು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಹಿಂದುಳಿದ ವರ್ಗಗಳ ನಾಯಕರು ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಹೊಟ್ಟೆ ಉರಿಯಿಂದ ಎನ್ನುತ್ತಾರೆ. ಒಳ್ಳೆಯ ಕೆಲಸ ಮಾಡಿದರೆ ಯಾರಿಗೆ ಹೊಟ್ಟೆ ಉರಿ ಬರುತ್ತದೆ? ಸುಖಾಸುಮ್ಮನೆ ಜನರ ಗಮನ ಬೇರೆಡೆಗೆ ಸೆಳೆಯಲು ನಾನು ಹಿಂದುಳಿದವನು, ಅದಕ್ಕೆ ಹೊಟ್ಟೆ ಉರಿ ಎಂದು ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಡಿ ಶಿವು ಅವರು, ಕಾಂಗ್ರೆಸ್ ಎದುರಿಸಲು ಬಿಜೆಪಿ ಜತೆಗೆ ಜೆಡಿಎಸ್ ಸೇರಿಕೊಂಡಿದೆ ಎಂದು ಹೇಳಿದ್ದಾರೆ. ನಿಮ್ಮನ್ನು ಬುಡ ಸಮೇತ ಕಿತ್ತೊಗೆಯಲು ನಾವು ಜೊತೆಯಾಗೆ ಇರುತ್ತೇವೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಅವರು ಡಿಕೆಶಿ ಅವರಿಗೆ ತಿರುಗೇಟು ನೀಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಜೆಡಿಎಲ್ಪಿ ನಾಯಕ ಸುರೇಶ್ ಬಾಬು ಸೇರಿದಂತೆ ಎರಡೂ ಪಕ್ಷಗಳ ಸಂಸದರು, ನಾಯಕರು, ಕಾರ್ಯಕರ್ತರು ಹಾಗೂ ಅಸಂಖ್ಯಾತ ಜನರು ಪಾಲ್ಗೊಂಡಿದ್ದರು.
10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿರಿ ಮುಂದುವರಿಯಿರಿ ನೋಡೋಣ: ಎಚ್​ಡಿಕೆ ಸವಾಲು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − eight =
Remember me
