ಬೆಂಗಳೂರುಸರ್ಕಾರ ಇತ್ತಿಚೆಗೆ ಎರಡನೇ ಹಂತದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಿದ್ದು ತಮ್ಮ ವ್ಯಾಪ್ತಿಯಲ್ಲಿ ಸಹ ಶಿಕ್ಷಕರ ಖಾಲಿ ಹುದ್ದೆಗಳ ಅವಶ್ಯಕತೆ ಮತ್ತು ಅಗತ್ಯತೆಗಳ ಬಗ್ಗೆ ನಿಖರ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಜಿಲ್ಲೆಗಳ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಿಗೆ 1.88 ಲಕ್ಷ ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 52,321 ಹುದ್ದೆಗಳು ಖಾಲಿ ಇವೆ. ಇದರಲ್ಲಿ 43,245 ಸಹ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು ಮೊದಲ ಹಂತದಲ್ಲಿ 26,970 ಹುದ್ದೆಗಳನ್ನು ಅತಿಥಿ ಶಿಕ್ಷಕರ ಮೂಲಕ ತುಂಬಲಾಗಿದೆ.
ಇದೀಗ ಮತ್ತೆ ಹತ್ತು ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡುವ ತೀರ್ಮಾನ ಸರ್ಕಾರ ಕೈಗೊಂಡಿದ್ದು ಖಾಲಿ ಇರುವ ಹುದ್ದೆಗಳಿಗೆ ಆದ್ಯತೆಯ ಮೇರೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಲು ಮುಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + six =
Remember me
