ತುಮಕೂರು:ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮಾಜಿ ಉಪ ಪ್ರಧಾನಿ, ಹಿರಿಯ ಬಿಜೆಪಿ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಅವರನ್ನು ಆಸ್ಪತ್ರೆಯೊಂದ ಡಿಸ್ಚಾರ್ಜ್​ ಮಾಡಲಾಗಿತ್ತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್ ಮಂಜುನಾಥ್ ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ಈ ಪ್ರಸಂಗ ನಡೆದಿದ್ದು, ಬಿಜೆಪಿ-ಜೆಡಿಎಸ್​ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುವಾಗ ಕೇಂದ್ರ ಸಚಿವರಾದ ಸೋಮಣ್ಣನವರು ಬಿಜೆಪಿಯ ಹಿರಿಯ ಮುಖಂಡ ಎಲ್​.ಕೆ. ಅಡ್ವಾಣಿ ಇಹಲೋಕ ತ್ಯಜಿಸಿದ್ದು, ಇದೀಗ ತಾನೇ ಮಾಹಿತಿ ಬಂದಿದೆ. ಈ ಸಂಬಂಧ ನಾನು ದಿಲ್ಲಿಗೆ ತೆರಳಬೇಕಾಗಿರುವ ಕಾರಣ ಕಾರ್ಯಕ್ರಮ ಮತ್ತೊಮ್ಮೆ ಮಾಡೋಣ ಎಂದು ಹೇಳಿ ಮೌನಾಚರಣೆಗೆ ಕರೆ ನೀಡಿದರು. ನಂತರ ಅಡ್ವಾಣಿ ಅವರು ಮೃತಪಟ್ಟಿಲ್ಲ ಎಂಬ ವಿಚಾರ ತಿಳಿದು ಪೇಚಿಗೆ ಸಿಲುಕಿದ ಸಚಿವ ಸೋಮಣ್ಣ ಯಾವುದೇ ಮಾಹಿತಿ ಇಲ್ಲದಿರುವ ಬಗ್ಗೆ ವಿಷಾದಿಸಿ ಸಾರ್ವಜನಿಕವಾಗಿ ಕ್ಷಮೆಕೇಳಿ ಸಭೆಯಿಂದ ನಿರ್ಗಮಿಸಿದರು.
ಇದನ್ನೂ ಓದಿ:ನಾಯಕನಾಗಿ ಆತನೊಬ್ಬನೇ ಆಡಿದರೆ ಸಾಲದು; ಪಾಕ್​ ನಾಯಕನ ಬೆನ್ನಿಗೆ ನಿಂತ ಮಾಜಿ ಕ್ರಿಕೆಟಿಗ
ಕುಣಿಗಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಸಿ.ಎನ್‌.ಮಂಜುನಾಥ್‌ ಕೂಡ ಇದೇ ಎಡವಟ್ಟು ಮಾಡಿದರು. ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ನಿಧನವಾಗಿರುವ ಬಗ್ಗೆ ಘೋಷಣೆ ಮಾಡಿದರು. ಮಾಜಿ ಸಚಿವ ಡಿ.ನಾಗರಾಜಯ್ಯ, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ ಸೇರಿದಂತೆ ಸಾವಿರಾರು ಬಿಜೆಪಿ, ಜೆಡಿಎಸ್ ಮುಖಂಡರು ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಅಡ್ವಾಣಿ ಅವರು ಮೃತಪಟ್ಟಿಲ್ಲ ಎಂಬ ವಿಚಾರ ತಿಳಿದು ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಹರಡಿ ಅವಾಂತರ ಸೃಷ್ಟಿ ಮಾಡುತ್ತಿರುವುದರಿಂದ ಅಚಾತುರ್ಯವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಸೋಮಣ್ಣ ಹಾಗೂ ಡಾ.ಸಿ.ಎನ್. ಮಂಜುನಾಥ್​ ಅವರ ಈ ಎಡವಟ್ಟು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty + twenty =
Remember me
