ಬೆಂಗಳೂರು:ತೆನೆ ಹೊತ್ತ ಮಹಿಳೆಯನ್ನು ಮುನ್ನಡೆಸುವ ಜವಾಬ್ದಾರಿ ಇನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೊರುವ ಸಾಧ್ಯತೆಗಳಿವೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಸಿ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದಾರೆ. ಅದರಲ್ಲೂ ಉಕ್ಕು ಮತ್ತು ಬೃಹತ್ ಕೈಗಾರಿಕೆ ಇಲಾಖೆ ಹೊಣೆಗಾರಿಕೆ ವಹಿಸಲಾಗಿದೆ. ಹಾಗಾಗಿ ಈ ಮಹತ್ತರ ಜವಾಬ್ದಾರಿ ನಿರ್ವಹಿಸುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪಕ್ಷದ ಕಡೆಗೆ ಲಕ್ಷ್ಯ ಕೊಡುವುದು ಕಷ್ಟ.
ಅಲ್ಲದೆ, ಬಹುಕಾಲ ನವದೆಹಲಿ ಹಾಗೂ ಬೇರೆ ಬೇರೆ ರಾಜ್ಯಗಳ ಪ್ರವಾಸ ಕೈಗೊಳ್ಳಬೇಕಾಗಿರುವುದರಿಂದ ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದುಕೊಂಡು ಪಕ್ಷ ಸಂಘಟನೆ, ಬಲವರ್ಧನೆ, ನಿರ್ವಹಣೆ ಸುಲಭದ ಮಾತಲ್ಲ. ಇದು ಕುಮಾರಸ್ವಾಮಿ ಅವರ ಅರಿವಿನಲ್ಲೂ ಇದೆ. ಜತೆಗೆ ಪಕ್ಷದ ಇತರ ನಾಯಕರ ಅಭಿಪ್ರಾಯವೂ ಆಗಿದೆ. ಕಾರಣ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನಿಖಿಲ್ ಹೆಗಲ ಮೇಲಿರಿಸುವ ಸಾಧ್ಯತೆಗಳು ದಟ್ಟವಾಗಿವೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಯುವಕರಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರನ್ನು ಜೋಡಿತ್ತಿನ ರೀತಿ ಬೆಳೆಸಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ‘ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿ ನನಗೆ ಕೊಟ್ಟಿದ್ದಾರೆ. ಇನ್ನು ಮುಂದೆ ರಾಜಕೀಯವೇ ನನಗೆಲ್ಲ. ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಕೂಡ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ಸದ್ಯಕ್ಕಿಲ್ಲ. ಪಕ್ಷದ ರಥವನ್ನು ಮುನ್ನಡೆಸುವ ಹೊಣೆಗಾರಿಕೆಯನ್ನು ಯಾರಿಗೆ ಕೊಡಬೇಕು ಎಂಬ ಕುರಿತು ಇನ್ನೂ ಚಿಂತನೆ ಆರಂಭವಾಗಿಲ್ಲ. ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ.ದೇವೇಗೌಡ ಪಕ್ಷ ಸಂಘಟನೆಯಲ್ಲಿ ಹೆಚ್ಚು ಕ್ರಿಯಾಶೀಲರಾಗಿ ತೊಡಗಿಕೊಳ್ಳುಂತೆ ಸೂಚಿಸಲಾಗುತ್ತದೆ. ಕಾಲಾನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಬೇರೊಬ್ಬರನ್ನು ಕೂರಿಸುವ ಸಾಧ್ಯತೆಗಳಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಅಲಂಕರಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೂಡ ವಯಸ್ಸಿನ ಕಾರಣದಿಂದ ಹೆಚ್ಚು ಪ್ರಯಾಣ ಮಾಡುವಂತಿಲ್ಲ. ಇದು ಕೂಡ ಪಕ್ಷ ಸಂಘಟನೆಗೆ ದೊಡ್ಡ ತೊಡರುಗಾಲಾಗಿದೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ಕೊಡುವ ಲಕ್ಷಣಗಳು ದಟ್ಟವಾಗಿವೆ.
ಮುಂಬರುವ ಬಿಬಿಎಂಪಿ, ತಾಲೂಕು/ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮೈತ್ರಿ ಮಾಡಿಕೊಂಡೇ ಎದುರಿಸುವುದು ಪಕ್ಕಾ ಆಗಿದೆ. ಹಾಗಾಗಿ ಈ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮಾಡಲು ಸಮಿತಿಯೊಂದನ್ನು ರಚಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 − 18 =
Remember me
