ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ, ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತಹೂಲ ರಾಜ್ಯದ ಜನರಲ್ಲಿ ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವೆ ಸಿಎಂ ಕುರ್ಚಿಗಾಗಿ ಕಸರತ್ತು ನಡೆಯುತ್ತಿದೆ. ಇದೆಲ್ಲದರ ನಡುವೆ ಬೆಂಬಲಿಗರು ಮಾತ್ರ ತಮ್ಮ ತಮ್ಮ ನಾಯಕರ ಭಾವಚಿತ್ರ ಬಳಸಿಕೊಂಡು “ರಾಜ್ಯದ ನೂತನ ಮುಖ್ಯಮಂತ್ರಿ”ಗೆ ಶುಭಾಶಯ ಎಂದು ಬ್ಯಾನರ್ ಅಳವಡಿಸುತ್ತಿದ್ದಾರೆ.
ಇದನ್ನೂ ಓದಿ:ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ: ಡಿಕೆಶಿ ಬಿಗಿ ಪಟ್ಟು, ಕಾಂಗ್ರೆಸ್​ ಹೈಕಮಾಂಡ್ ಕಂಗಾಲು
ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ ಡಿಕೆಶಿ, ಬಿಗಿ ಪಟ್ಟು ಹಿಡಿದಿರುವುದರಿಂದ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಸದ್ಯ ಕಾಂಗ್ರೆಸ್​ ಮುಂದು ಎರಡೂವರೆ ವರ್ಷ ಸಿದ್ದರಾಮಯ್ಯ ಇನ್ನೆರೆಡೂವರೆ ವರ್ಷ ಡಿಕೆಶಿ ಎಂಬ ಸೂತ್ರ ರೆಡಿಯಾಗಿದೆ. ಆದರೆ, ಈ ಸೂತ್ರಕ್ಕೆ ಡಿಕೆಶಿ ಒಪ್ಪಿಗೆ ನೀಡುತ್ತಿಲ್ಲ ಎಂಬ ಮಾತುಗಳು ಕಾಂಗ್ರೆಸ್​ ವಲಯದಲ್ಲಿ ಕೇಳಿಬರುತ್ತಿದೆ. ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ ಎಂದು ಡಿಕೆಶಿ ಹೇಳುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಹತ್ಯೆ ಪ್ರಕರಣ | ಆರೋಪಿಗೆ ಯಾವುದೇ ಮಾನಸಿಕ ಸಮಸ್ಯೆಗಳಿಲ್ಲ; ವೈದ್ಯರಿಂದ ಸ್ಪಷ್ಟನೆ
ಡಿಕೆಶಿ ಬಿಗಿ ಪಟ್ಟಿಗೆ ಇದೀಗ ಕಾಂಗ್ರೆಸ್​ ಹೈಕಮಾಂಡ್​ ಕಂಗಲಾಗಿದೆ. ಕಾಂಗ್ರೆಸ್​ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರದ್ದೂ ಪಾತ್ರವಿದೆ. ಆದರೆ, ಸಿದ್ದರಾಮಯ್ಯರನ್ನು ಕಡೆಗಣಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಇದೇ ರೀತಿ ಡಿಕೆಶಿ ಪಟ್ಟನ್ನು ಅಲ್ಲಗಳೆಯುವಂತಿಲ್ಲ. ಇದೀಗ ಈ ಕಗ್ಗಂಟ್ಟನ್ನು ಕಾಂಗ್ರೆಸ್​ ಹೈಕಮಾಂಡ್​ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
