ಉಡುಪಿ:ಸಚಿವ ಈಶ್ವರಪ್ಪ ವಿರುದ್ಧ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ವಿಚಾರ ಇದೀಗ ರಾಜಕೀಯ ಹಾಗೂ ಸಾಮಾಜಿಕವಾಗಿ ಭಾರಿ ಚಾಲ್ತಿಯಲ್ಲಿದ್ದು, ಅಷ್ಟಕ್ಕೂ ಸಂತೋಷ್ ಉಡುಪಿಗೆ ಬಂದಿದ್ದೇಕೆ ಎಂಬ ವಿಷಯವೊಂದು ಕುತೂಹಲ ಕೆರಳಿಸಿದೆ.
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್​, ಸ್ನೇಹಿತರೊಂದಿಗೆ ಉಡುಪಿಗೆ ಬಂದು ಉಡುಪಿಯ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲ್ಸ್ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ನ ರೂಂ ನಂಬರ್ 207ರಲ್ಲಿ ಸಂತೋಷ್​ ಶವವಾಗಿ ಪತ್ತೆಯಾಗಿದ್ದಾರೆ.
ಆದರೆ ಸಂತೋಷ್ ಉಡುಪಿಗೆ ಬಂದಿದ್ದು ಏಕೆ ಎಂಬ ಕುರಿತು ಇದೀಗ ಹಲವರಲ್ಲಿ ಕುತೂಹಲ ಮೂಡಿಸಿದೆ. ಸೋಮವಾರ-ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸಿಎಂ ಅವರನ್ನು ಭೇಟಿಯಾಗಿ ತಮ್ಮ ಬಾಕಿ ಹಣ ಪಾವತಿ ಕುರಿತು ಬೇಡಿಕೆ ಇಡಲು ಬಂದಿದ್ದರು. ಆದರೆ ಸಿಎಂ ಭೇಟಿ ಸಾಧ್ಯವಾಗದ್ದರಿಂದ ಲಾಡ್ಜ್​ನಲ್ಲಿ ತಂಗಿರುವ ಸಾಧ್ಯತೆ ಇದ್ದು, ಬಳಿಕ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಇನ್ನು ಸಂತೋಷ್ ಈ ಹಿಂದೆಯೂ ಬಾಕಿ ಹಣ ಪಾವತಿ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದರು.
ಆಟವಾಡುತ್ತಿದ್ದಾಗ ಮಹಡಿಯಿಂದ ಕೆಳಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು!

ರೌಡಿಯ ಹೆಂಡ್ತಿಗೇ ಮೆಸೇಜ್ ಮಾಡ್ತಿದ್ದ ಕಿಡಿಗೇಡಿ!; ಬಳಿಕ ರಸ್ತೆಯಲ್ಲಿದ್ದ ವಾಹನಗಳ ಗಾಜು ಪುಡಿಪುಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 5 =
Remember me
