ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ವಿಚಾರ ಕಾಂಗ್ರೆಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಯಿತು.ಸೋಮವಾರ ಸಂಜೆ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಜತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಕೂಡ ಉಪಸ್ಥಿತರಿದ್ದರು.ವಿಧಾನ ಪರಿಷತ್ ನಾಮ ನಿರ್ದೇಶನ ಹಿನ್ನೆಲೆಯಲ್ಲಿಯೇ ಮೂರು ಹೆಸರು ಅಂತಿಮಗೊಂಡಿದ್ದು, ಆ ಹೆಸರಿನೊಂದಿಗೆ ಸಿಎಂ ರಾಜಭವನಕ್ಕೆ ತೆರಳಿದ್ದಾರೆ. ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸುವುದಕ್ಕಾಗಿಯೇ ಭೇಟಿ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಊಹಿಸಿದರು.ಆದರೆ, ಇದೊಂದು ಸೌಹಾರ್ದಯುತ ಭೇಟಿಯಷ್ಟೇ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ನಾಮನಿರ್ದೇಶನಕ್ಕೆ ಯಾರನ್ನು ಪರಿಗಣಿಸಬೇಕೆಂದು ಹೈಕಮಾಂಡ್ ತೀರ್ಮಾನಿಸಬೇಕು. ಇಲ್ಲಿ ನಿರ್ಧಾರವಾಗಲ್ಲ ಎಂದು ಸಿಎಂ ಆಪ್ತರು ತಿಳಿಸಿದ್ದಾರೆ.ಪ್ರಸ್ತುತ ಸುಧಾಮ್ ದಾಸ್, ಮಾಜಿ ಸಚಿವ ಎಂ.ಆರ್.ಸೀತಾರಾಮ್, ಮನ್ಸೂರ್ ಹೆಸರು ಅಂತಿಮವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಷ್ಟರ ನಡುವೆ ಉಮಾಶ್ರೀ, ಬಿ.ಎಲ್.ಶಂಕರ್, ಕೆಪಿಸಿಸಿ ವಕ್ತಾರ ನಟರಾಜ್ ಗೌಡ, ಆರತಿಕೃಷ್ಣ, ರಾಜೀವ್ ಗೌಡ ಹೆಸರೂ ಕೂಡ ಚರ್ಚೆಯಲ್ಲಿದೆ.ಪಿ.ಆರ್.ರಮೇಶ್, ಕೊಂಡಜ್ಜಿ ಮೋಹನ್ ಅವಧಿ ಮೇ 17 ರಂದು ಮತ್ತು ಸಿ.ಎಂ.ಲಿಂಗಪ್ಪ ಅವರ ಅವಧಿ ಜೂನ್ 8 ರಂದು ಕೊನೆಗೊಂಡಿದ್ದರಿಂದ ಮೂರು ಎಂಎಲ್‌ಸಿ ಸ್ಥಾನಗಳು ತೆರವಾಗಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + eighteen =
Remember me
