ದಾವಣೆಗೆರೆ:ತೆರಿಗೆ ಹಂಚಿಕೆ ವಿಚಾರದಲ್ಲಿ ನಾನು ಸುಳ್ಳು ಹೇಳಿಲ್ಲ. ಸುಳ್ಳು ಅಂತಾ ಸಾಬೀತು ಮಾಡಿದ್ರೆ ರಾಜಕೀಯ ಬಿಡ್ತೀನಿ ಎಂದು ಬಿಜೆಪಿಗರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ವಕೀಲರು ಜೀನ್ಸ್​ ಧರಿಸಿ ಬರಬಹುದೇ? ಗುವಾಹಟಿ ಹೈಕೋರ್ಟ್ ಹೇಳಿದಿಷ್ಟು?
ದಾವಣಗೆರೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ. ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಬಿಎಸ್ ಯಡಿಯೂರಪ್ಪ ತಲೆ ಅಲ್ಲಾಡಿಸುತ್ತಾರೆ ಅಂದ್ರೆ ನಾವು ಅಲ್ಲಾಡಿಸಬೇಕಾ? ಅವರಂತೆ ನಾವೂ ಬಾಯಿ ಮುಚ್ಕೊಂಡಿರಬೇಕಾ ಎಂದು ಗುಡುಗಿದರು.
ಮುಖ್ಯಮಂತ್ರಿ@siddaramaiahಅವರು ಇಂದು ಹರಿಹರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ?
ಮುಖ್ಯಮಂತ್ರಿಯಾಗಿದ್ದಾಗ@BSYBJPಅವರು ಕೇಂದ್ರದ…
— CM of Karnataka (@CMofKarnataka)February 9, 2024

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ. ಕಟ್ಟಿದರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ 4,30,000 ಕೋಟಿ ರೂ. ತೆರಿಗೆ ಸಂಗ್ರಹವಾದರೆ, ನಮಗೆ 50,257 ಕೋಟಿ ರೂ.ಮಾತ್ರ ಮರಳಿ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ ಎಂದರು.
ಬರನಿರ್ವಹಣೆ ಸಂಬಂಧ ಕುಡಿಯುವ ನೀರು, ಮೇವು, ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂ.ಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜನರು ಗುಳೇ ಹೋಗದಂತೆ ತಪ್ಪಿಸಲು ಹಾಗೂ ಅವರ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ತಾತ್ಕಾಲಿಕ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2,000 ರೂ. ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ ಎಂದರು.
ಐದು ತಿಂಗಳು ಕಳೆದರೂ ಕೇಂದ್ರ ಕೇಂದ್ರದ ಬಿಜೆಪಿ ಸರ್ಕಾರ ಬರಪರಿಹಾರ ನೀಡಿಲ್ಲ. ರಾಜ್ಯದ ಬಿಜೆಪಿ ನಾಯಕರು ಕೇವಲ ಭಾಷಣ ಮಾಡುತ್ತಾರೆಯೇ ಹೊರತು, ಕೇಂದ್ರದೊಂದಿಗೆ ಸಂವಹನ ನಡೆಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುತ್ರಿ ಐರಾ ನೋಡಲು ಟೀಂ ಇಂಡಿಯಾ ಆಟಗಾರ ಶಮಿ ಪರದಾಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 20 =
Remember me
