ಬೆಂಗಳೂರುರಾಜ್ಯಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಮಾ.1ರಂದು ಶುಕ್ರವಾರ ನಡೆಯಲಿರುವ ವಿಜ್ಞಾನ ವಿಷಯದ ಪರೀಕ್ಷೆಯ ಪರೀಕ್ಷಾ ಸಮಯದ ಬದಲಾವಣೆ ಮಾಡಿರುವುದು ಕೋಮು ಸ್ವರೂಪ ಪಡೆದುಕೊಂಡಿದೆ.
ಪೂರ್ವಸಿದ್ಧತಾ ಪರೀಕ್ಷೆಯು ೆ.26ರ ಸೋಮವಾರದಿಂದ ಮಾ.2ರ ಶನಿವಾರದವರೆಗೂ ನಡೆಯಲಿದೆ. ಎಲ್ಲ ಪರೀಕ್ಷೆಗಳು ಬೆಳಗಿನ ಅವಧಿಯಲ್ಲಿ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೂ ನಡೆಯಲಿವೆ. ಆದರೆ, ಶುಕ್ರವಾರ ನಡೆಯಲಿರುವ ವಿಜ್ಞಾನ ಪರೀಕ್ಷೆಯನ್ನು ಮಧ್ಯಾಹ್ನ 2ರಿಂದ ಸಂಜೆ 5.15ರ ವರೆಗೂ ನಡೆಸುತ್ತಿದೆ.
ವಿಶೇಷವಾಗಿ ಶುಕ್ರವಾರದ ಪರೀಕ್ಷೆಯನ್ನು ಮಾತ್ರ ಏಕೆ ಸಮಯ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿರುವ ಕಾರಣ, ಸಮುದಾಯವೊಂದರ ಧಾರ್ಮಿಕ ಆಚರಣೆಗೆ ಅವಕಾಶ ಮಾಡಿಕೊಟ್ಟಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿವೆ. ಬಿಜೆಪಿ ಸೇರಿ ಹಲವು ರಾಜಕೀಯ ನಾಯಕರು, ಬೆಂಬಲಿರು, ನಾಗರಿಕರು ಸೇರಿ ಹಲವು ಮಂದಿ ಇದನ್ನು ಪ್ರಶ್ನಿಸಿದ್ದಾರೆ.
ಮುಸ್ಲಿಂ ತುಷ್ಟೀಕರಣ:ರಾಜ್ಯ ಸರ್ಕಾರವು ಈಗ ನೇರವಾಗಿ ಶಿಕ್ಷಣ ಇಲಾಖೆಯ ಮಕ್ಕಳ ಕೊಠಡಿಗಳಿಗೂ ಆವರಿಸಿದೆ. ಈ ಮುಸ್ಲಿಂ ತುಷ್ಟೀಕರಣವನ್ನು ನೇರವಾಗಿ ಖಂಡಿಸಲೇಬೇಕಿದೆ ಎಂದು ಕೆಲವರು ವಾಟ್ಸ್‌ಆೃಪ್‌ಗಳಲ್ಲಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ.
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಥಮ, ದ್ವಿತೀಯ, ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೆಳಗಿನ ಅವಧಿಯಲ್ಲಿ ನಡೆಸುತ್ತಿದ್ದು, ಮಾ.1ರಂದು ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ ಬೆಳಗಿನ ಅವಧಿಯ ಪರೀಕ್ಷೆಯನ್ನು ಮಧ್ಯಾಹ್ನದ ಅವಧಿಯಲ್ಲಿ ನಡೆಸಲು ಸಮಯ ಬದಲಾವಣೆ ಮಾಡಲಾಗಿದೆ.ಕೆಲವು ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ರಚಿಸಲಾಗಿದೆ. ಈ ಶಾಲಾ-ಕಾಲೇಜುಗಳಲ್ಲಿಯೇ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಬೇಕಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1ರಂದು ಆರಂಭವಾಗುತ್ತಿದ್ದು, ಅಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೂ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೊಂದರೆ ಆಗುವುದನ್ನು ಮನಗಂಡು ಮಾ.1ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ನಡೆಸಲು ಸಮಯದ ನಿಗದಿ ಮಾಡಲಾಗಿದೆ ಎಂದು ಮಂಡಳಿ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
