ಬೆಂಗಳೂರು:ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಇಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು ಎಂದರು.
ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳು ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂಬುದು ತಿಳಿದಿಲ್ಲ. ಡಿಸೆಂಬರ್​ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದರು.
ಡಿಸಿಎಂ ನನ್ನೊಂದಿಗೆ ಜಾತಿ ಜನಗಣತಿ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು. ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು, ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿಸಿಲ್ಲ ಎಂದರು.
ಟಾಯ್ಲೆಟ್ ರೂಮಿನಲ್ಲಿ ಟೂತ್ ಬ್ರಷ್ ಇಡುತ್ತಿದ್ದೀರಾ? ಇದು ತುಂಬಾ ಅಪಾಯಕಾರಿ….

ಆಟೋ ಟ್ರಕ್‌ಗೆ ಡಿಕ್ಕಿ: ಸಿಸಿಟಿವಿ ಕ್ಯಾಮೆರಾದಲ್ಲಿನ ಭೀಕರ ದೃಶ್ಯ ವೈರಲ್​- ಆಟೋದಲ್ಲಿದ್ದ ಮಕ್ಕಳ ಸ್ಥಿತಿ ಏನಾಯಿತು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 3 =
Remember me
