ಮೈಸೂರು:ಇಂದು ಮೈಸೂರಿನಲ್ಲಿ ರಾಜ್ಯಪಾಲರು ನೀಡಿದ್ದ ನೋಟಿಸ್​ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದ್ದರಲ್ಲ? ನಾವು ಇದನ್ನೆಲ್ಲ ಹೆದರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೆ ತಾನೇ ಹೆದರೋದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಅದು ಗೊತ್ತಿದೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದರು.
ಇದನ್ನೂ ಓದಿ:ಒಳ ಮೀಸಲು ವಿಚಾರ ಸುಪ್ರೀಂಕೋರ್ಟ್ ತೀರ್ಪಿಗೆ ಮುಖ್ಯಮಂತ್ರಿ ಚಂದ್ರು ಸ್ವಾಗತ
“136 ಶಾಸಕರ ಬೆಂಬಲದಿಂದ ನಾನು ಸಿಎಂ ಆಗಿದ್ದೇನೆ. ಈ ಆರೋಪದಲ್ಲಿ ನನ್ನ ಪಾತ್ರ ಇಲ್ಲ. ಆದರೆ ನನ್ನ ಆರೋಪ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸೋದಕ್ಕೆ ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ಕೇಂದ್ರ ಸರ್ಕಾರ ತಾನೆ? ಈ ಮೂಲಕರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್​ಗೆ ನಾನ್ಯಾಕೆ ಹೆದರಲಿ.ಅಶೋಕ್ ಹೆದರಿರಬೇಕು, ಅವರಿಗೆ ಭಯ, ನನಗಲ್ಲ” ಎಂದು ತಿರುಗೇಟು ನೀಡಿದರು.
“ಟಿ.ಜೆ. ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26ರ ಬೆಳಗ್ಗೆ 11:30ಕ್ಕೆ ದೂರು ಕೊಡ್ತಾನೆ. ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಅಂತಾ ನಮ್ಮ ಅಧಿಕಾರಿ ಎಲ್‌.ಕೆ ಅತೀಕ್​ಗೆ ಹೇಳ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗ್ಯಾಕೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ? ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.
ವಯನಾಡು ಭೂದುರಂತ: CSIR-NIIST ವತಿಯಿಂದ ತಯಾರಾಗ್ತಿದೆ ದೀರ್ಘಾವಧಿಯ ಆಹಾರ! 1000 ಪ್ಯಾಕೆಟಿಗೆ 70 ಜನರ ಶ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − ten =
Remember me
