ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಆ.27ರಂದು 2023-24ರ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಈ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ತೋರುತ್ತಿರುವುದು ು ಹಲವು ಅನುಮಾನಗಳಿಗೆ ಕಾರಣವಾಗಿದೆ ಹೇಳಿದ್ದಾರೆ.
ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್ಸಿ ಹಠಕ್ಕೆ ಬಿದ್ದಿರುವುದು ಸರಿಯಲ್ಲ ಎಂದಿದ್ದಾರೆ.
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್ಸಿ ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ರಾಜ್ಯ ಸರಕಾರ ಹಾಗೂ ಕೆಪಿಎಸ್ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲ ಆಯಾಮಗಳನ್ನು ಪರಿಶೀಲಿಸಿ ಎಲ್ಲ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 15 =
Remember me
