ಹುಬ್ಬಳ್ಳಿ:ದಾಂಪತ್ಯ ಕಲಹ ಒಂದೇ ಕುಟುಂಬದ ಮೂವರನ್ನು ಬಲಿ ಪಡೆದುಕೊಂಡಿದೆ. ಹೆಂಡತಿ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಆತನ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಪಕ್ಕೀರಪ್ಪ ಮಾದರ ತನ್ನ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿ ಮುದಕವ್ವ, ಮಕ್ಕಳಾದ ಶ್ರಾವಣಿ (8), ಶ್ರೇಯಸ್ (6) ಹಾಗೂ 4 ವರ್ಷದ ಸೃಷ್ಟಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ.
ಗಂಭೀರವಾಗಿ ಗಾಯಗೊಂಡಿದ್ದ ಮುದುಕವ್ವ ಹಾಗೂ ಮಕ್ಕಳನ್ನು ಕಿಮ್ಸ್​ನಲ್ಲಿ ದಾಖಲಿಸಲಾಗಿತ್ತು. ಬೆಳಗ್ಗೆ ಚಿಕಿತ್ಸೆ ಫಲಿಸದೆ ಶ್ರೇಯಸ್ ಮೃತಪಟ್ಟಿದ್ದರೆ, ಇದೀಗ ಸೃಷ್ಟಿ ಕೂಡ ಸಾವಿಗೀಡಾಗಿದ್ದಾಳೆ. ಮೂವರು ಮಕ್ಕಳಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ಪತ್ನಿ ಹಾಗೂ ಇನ್ನೊಬ್ಬಳು ಪುತ್ರಿಯ ಪರಿಸ್ಥಿತಿ ಗಂಭೀರವಾಗಿದೆ.
ಹೆಂಡತಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದನ್ನು ಮಕ್ಕಳು ನೋಡಿದ್ದಕ್ಕೆ, ಈತ ಮೂವರು ಮಕ್ಕಳ ಮೇಲೂ ಕೊಡಲಿ ಬೀಸಿದ್ದ. ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆಗೆ ಕಾರಣವೇನು ಎಂಬ ಬಗ್ಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?

ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ

ಸಾವಿರಾರು ಕೋಟಿ ರೂ. ವಂಚಿಸಿದ ಮಲ್ಯ-ಮೋದಿಯನ್ನೇ ಏನೂ ಮಾಡಿಲ್ಲ; 3-4 ಕೋಟಿ ಮೋಸ ಮಾಡಿದ ನನ್ನ ಚಿಂತೆ ನಿಮಗ್ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 14 =
Remember me
