ಹಾಸನ:ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿಯ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಅದರಲ್ಲೂ ಕ್ರಿಕೆಟ್ ಬೆಟ್ಟಿಂಗ್​ನಿಂದಾಗಿ ದಾಂಪತ್ಯದಲ್ಲಿ ಬಿರುಕು ಮೂಡಿ, ಅದೇ ಕಾರಣಕ್ಕೆ ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದಾನೆ ಎಂದು ಸಾವಿಗೀಡಾದ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.
ಹಾಸನ ತಾಲೂಕು ದೊಡ್ಡ ಮಂಡಿಗನಹಳ್ಳಿ ಗ್ರಾಮದ ತೇಜಸ್ವಿನಿ (28) ಸಾವಿಗೀಡಾದ ಮಹಿಳೆ. ಈಕೆಯ ಪತಿ ಮಧು ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ನಿನ್ನೆ ಮನೆಯಲ್ಲಿ ತೇಜಸ್ವಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಸಾವಿಗೆ ಪತಿಯೇ ಕಾರಣವೆಂದರು ಆರೋಪಿಸಿ, ಮಧು ಮನೆ ಮುಂದೆ ಶವವಿಟ್ಟು ಮಹಿಳೆ ಮನೆಯವರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮಧು, ಕ್ರಿಕೆಟ್ ಬೆಟ್ಟಿಂಗ್ ವ್ಯಸನಿಯಾಗಿದ್ದು, ಅದಕ್ಕಾಗಿಯೇ 20 ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಪತಿಯನ್ನು ಪತ್ನಿ ಪ್ರಶ್ನೆ ಮಾಡಿದ್ದು, ಇದರಿಂದ ಸಿಟ್ಟಿಗೆದ್ದ ಮಧು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಎಎಸ್​ ಅಧಿಕಾರಿ ಮಂಜುನಾಥ್ ಬಂಧನ

ಜನಪ್ರತಿನಿಧಿಗಳನ್ನು ಪ್ರಶ್ನಿಸಲಾರಂಭಿಸಿದ ಸಾರ್ವಜನಿಕರು; ಇಂದು ಮತ್ತೊಬ್ಬ ಶಾಸಕರನ್ನು ತರಾಟೆಗೆ ತಗೊಂಡ ಜನರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eight =
Remember me
