ಬೆಂಗಳೂರು:ಮಹಿಳೆಯೊಬ್ಬಳು ತನ್ನ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದು, ಪತಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ರಶ್ಮಿ (32) ಸಾವಿಗೀಡಾದ ಮಹಿಳೆ. ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈಕೆ ತಾನು ವಾಸವಿದ್ದ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾಳೆ. ಈಕೆ ಖಾಸಗಿ ಕಂಪನಿಯ ಇಂಜಿನಿಯರ್ ಅರವಿಂದ್ ಎಂಬಾತನ ಪತ್ನಿ.
ಇದನ್ನೂ ಓದಿ:ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಮಂಡ್ಯ ಮೂಲದ ರಶ್ಮಿ ಮತ್ತು ಶ್ರೀರಂಗಪಟ್ಟಣದ ಅರವಿಂದ್ ಮದುವೆ ಹತ್ತು ವರ್ಷಗಳ ಹಿಂದೆ ನಡೆದಿದ್ದು, ಈ ದಂಪತಿಗೆ ಐದು ವರ್ಷದ ಮಗ ಇದ್ದಾನೆ. ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದಳು. ಇದು ಸಾವೋ ಆತ್ಮಹತ್ಯೆಯೋ ಎಂಬುದಿನ್ನೂ ಖಚಿತವಾಗಿಲ್ಲ. ಆದರೆ ಪತಿಯೇ ಪತ್ನಿಯನ್ನು ಕೊಲೆ ಮಾಡಿ ನೇತು ಹಾಕಿದ್ದಾನೆ ಎಂದು ರಶ್ಮಿ ಕುಟುಂಬಸ್ಥರು ಆರೋಪಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಮಾಣಿಕ ಎಸ್​ಐ ಎಂದು ಗಣರಾಜ್ಯೋತ್ಸವದಂದು ಪ್ರಶಸ್ತಿ ಪಡೆದಿದ್ದಾಕೆ 5 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ಲು!

ತಂದೆಯನ್ನು ಬಿಜೆಪಿ ಮರೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ವಿಜೇತಾ ಅನಂತಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
