ಧಾರವಾಡ:ಏಳು ತಿಂಗಳ ಹಿಂದಷ್ಟೇ ಮದುವೆಯಾಗಿ ಹೊಸ ಬದುಕಿನ ಕನಸು ಕಟ್ಟಿಕೊಂಡು ಗಂಡನ ಮನೆಯ ಹೊಸ್ತಿಲು ತುಳಿದ ಯುವತಿ ಇದೀಗ ದುರ್ಮರಣ ಕಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಗಂಡನ ಕೊಲೆ ಮಾಡಿದ್ದಾನೆ ಎನ್ನುವ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ:ಮೈಮೇಲೆ ಏನೋ ಹರಿದಂತಾಯ್ತು-ಕಣ್ಣುಬಿಟ್ಟು ನೋಡಿದ್ರೆ ಕಾಳಿಂಗ ಸರ್ಪ! ಕೊಪ್ಪದಲ್ಲಿ ಬೆಚ್ಚಿಬೀಳೋ ಘಟನೆ
ಕಲಘಟಗಿ ತಾಲ್ಲೂಕಿನ ಹುಲಗಿನಗಟ್ಟಿ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಲಕ್ಷ್ಮಿ ರುದ್ರಪ್ಪ ಚಿಕ್ಕಮ್ಮನವರ (19) ಕೊಲೆಯಾದ ಮಹಿಳೆ. ಈಕೆ ಏಳು ತಿಂಗಳ ಹಿಂದೆ ವೀರಭದ್ರಪ್ಪ ಚಿಕ್ಕಮ್ಮನವರ್​ ಹೆಸರಿನ ವ್ಯಕ್ತಿಗೆ ಮದುವೆಯಾಗಿದ್ದಳು. ಇದೀಗ ಆಕೆ ಜಮೀನಿನಲ್ಲಿ ಕುತ್ತಿಗೆಗೆ ಹಗ್ಗ ಬಿಗಿದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೌಟುಂಬಿಕ ಕಲಹಗಳ ಕಾರಣದಿಂದ ಆಕೆಯ ಗಂಡನೇ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ ಎಂದು ಮಹಿಳೆಯ ಸಂಬಂಧಿಕರು ದೂರಿದ್ದಾರೆ.
ಸ್ಥಳಕ್ಕೆ ಕಲಘಟಗಿ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)
ಬೇಡ ಎಂದು ಎಸೆದಿದ್ದ ಮೊಬೈಲ್​ ಕವರ್​ಗೆ​ ಸಿಕ್ತು 1.19 ಕೋಟಿ ರೂಪಾಯಿ!

ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
