ಬೆಳಗಾವಿ:ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಾರೆ ಎಂಬ ಕಾರಣಕ್ಕೆ ಪತಿ ನೀಡುತ್ತಿದ್ದ ಹಿಂಸೆ ತಾಳಲಾರದೆ ಪತ್ನಿಯು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಸೇವಂತಿ ಪ್ಯಾಟಿ (32), ಮಹಾಂತೇಶ್ ಪ್ಯಾಟಿ(12) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗ. ಆತ್ಮಹತ್ಯೆಗೆ ಪತಿ ಬೆಳ್ಳಪ್ಪನ ಕಿರುಕುಳು ಕಾರಣ ಎನ್ನಲಾಗಿದ್ದು, ಆತನ ವಿರುದ್ಧ ಕೊಲೆ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ:ಪ್ರೀತಿಸುವ ನಾಟಕ, ಐದೇ ತಿಂಗಳಲ್ಲಿ ಲಿವಿಂಗ್ ಟುಗೆದರ್​; ಅವಳಾಗುತ್ತಿದ್ದಂತೆ ಗರ್ಭಿಣಿ, ಇವನು ಪರಾರಿ…
ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಕ್ಕೆ ಗಂಡನಿಂದ ನಿತ್ಯವೂ ಹಿಂಸೆ ಅನುಭವಿಸುತ್ತಿದ್ದ ಪತ್ನಿ ಸೇವಂತಿ, ಒಂದು ಮಗುವನ್ನು ವರ್ಷದ ಹಿಂದೆ ತವರು ಮನೆಯಲ್ಲಿ ಬಿಟ್ಟಿದ್ದು, ಇನ್ನೊಬ್ಬ ಮಗನನ್ನು ತನ್ನೊಂದಿಗೆ ಇರಿಸಿಕೊಂಡಿದ್ದಳು. ಎಂದಿನಂತೆ ಗಲಾಟೆ ಮಾಡಿದ್ದ ಪತಿ, ನಿನ್ನೆಯೂ ಹೆಂಡತಿ-ಮಗನ ಮೇಲೆ ಹಲ್ಲೆ ಮಾಡಿದ್ದ. ಮಾತ್ರವಲ್ಲ, ಬೇರೆ ಮದುವೆ ಆಗುತ್ತೇನೆ ಎಂಬುದಾಗಿಯೂ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಸೇವಂತಿ, ಮಗನೊಂದಿಗೆ ಗ್ರಾಮದ ಹೊರವಲಯದ ಕೆರೆಗೆ ಹಾರಿದ್ದಳು.
ಇದನ್ನೂ ಓದಿ:‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಇಂದು ಬೆಳಗ್ಗೆ ಆತ್ಮಹತ್ಯೆ ವಿಚಾರ ಬಹಿರಂಗಗೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರ ಭೇಟಿ ನೀಡಿದ್ದಾರೆ. ಇಬ್ಬರ ಶವಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮತ್ತೊಂದೆಡೆ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಸೇವಂತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಠಾಣೆಗೇ ಬಂದಿತ್ತು ಎಸ್​ಪಿ ಕಾರು: ಸರ್ಕಲ್ ಇನ್​ಸ್ಪೆಕ್ಟರ್​ಗೂ ಮುಳುವಾಯ್ತು ಎಸ್​ಐ ದರ್ಬಾರು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
