ವಿಜಯಪುರ:ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ ಪತ್ನಿ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಾದ ಪತಿ, ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಯತ್ತ ಕೊಡಲಿಯನ್ನು ಬೀಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಮುದ್ದೇಬಿಹಾಳ ಪೊಲೀಸರು, ಆರೋಪಿ ಕಲ್ಲಪ್ಪನನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಕೆಲಸಕ್ಕೆ ಹೋಗಿದ್ದ ಹೆಂಡತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!; ಪತ್ನಿಯ ಶೀಲದ ಕುರಿತು ಅನುಮಾನ?

ಬಿಜೆಪಿ ಶಾಸಕನ ಬರ್ತ್​ಡೇ ಪಾರ್ಟಿಯಲ್ಲಿ ಎರಡು ಸಾವು; ಒಬ್ಬನಿಗೆ ಗುಂಡೇಟು, ಇನ್ನೊಬ್ಬನಿಗೆ ಕಲ್ಲೇಟು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
