ಉತ್ತರ ಕನ್ನಡ:ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡ ಪತಿ ಆಕೆಯನ್ನು ಮಾರಕಾಸ್ತ್ರದಿಂದ ಮನಸೋ ಇಚ್ಛೆ ಕೊಚ್ಚಿಹಾಕಿ ಬಳಿಕ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಈ ದುರ್ಘಟನೆಯಲ್ಲಿ ಗಂಡ-ಹೆಂಡತಿ ಇಬ್ಬರೂ ದುರಂತ ಅಂತ್ಯ ಕಂಡಿದ್ದು, ಮಕ್ಕಳೀಗ ಅನಾಥವಾಗಿವೆ.
ಹೊನ್ನಾವರದ ಮೇಲಿನ ಇಡಗುಂಜಿ ಬಳಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡ ಪುಟ್ಟ ಮಕ್ಕಳ ರೋದನ ಮುಗಿಲು ಮುಟ್ಟಿದೆ. ವೆಂಕಟೇಶ ನಾಯ್ಕ (38) ನೇಣಿಗೆ ಶರಣಾದವ. ಈತನ ಅಟ್ಟಹಾಸಕ್ಕೆ ಬಲಿಯಾದವಳು ಪತ್ನಿ ಶೈಲಾ ನಾಯ್ಕ (33).
ಇದನ್ನೂ ಓದಿರಿಸ್ನೇಹಿತನ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ನಾಲ್ವರಲ್ಲಿ ಇಬ್ಬರು ದಾರಿಯಲ್ಲೇ ಹೆಣವಾದರು!
ಪತ್ನಿ ಶೈಲಾ ನಾಯ್ಕಳ ಮೇಲೆ ಅನುಮಾನ ಪಡುತ್ತಿದ್ದ ಪತಿ ವೆಂಕಟೇಶ ಇದೇ ವಿಚಾರವಾಗಿ ನಿತ್ಯ ಗಲಾಟೆ ಮಾಡುತ್ತಿದ್ದ. ಶನಿವಾರ ಬೆಳಗ್ಗೆಯೂ ಕುಡಿದ ಅಮಲಿನಲ್ಲಿ ಪತ್ನಿ ಜತೆ ಜಗಳ ತೆಗೆದಿದ್ದ. ರೊಚ್ಚಿಗೆದ್ದ ಪತಿ, ಕತ್ತಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿ ಆಕೆಯೊಂದಿಗೆ ಮಕ್ಕಳನ್ನೂ ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಬಳಿಕ ಅಡುಗೆ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಗಂಭೀರ ಗಾಯಗೊಂಡು ನರಳಾಡುತ್ತಿದ್ದ ಪತ್ನಿ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಬಂದ ಪತ್ನಿ, ಕಾರಣ ಹೀಗಿದೆ

ಡ್ರಗ್ಸ್​ ಜಾಲದ ಕಿಂಗ್​ಪಿನ್​ ಅನಿಕಾ ಬಾಯ್ಬಿಟ್ಲು ಸ್ಫೋಟಕ ರಹಸ್ಯ, ಕನ್ನಡ ನಟ-ನಟಿಯರೇ ಗಿರಾಕಿಗಳು!

ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
