ಬೆಂಗಳೂರು:ಇದೀಗ ಸರ್ಕಾರ ಬದಲಾಗಿದ್ದು ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೊಮ್ಮೆ ಜೀವ ಬರಲಿದೆಯಾ ಎನ್ನುವ ಪ್ರಶ್ನೆ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಖಡಕ್ ಸೂಚನೆ ನೀಡಿದ್ದ ಬೆನ್ನಲ್ಲೆ ಡಿಜಿಪಿ, ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ನೂತನ ಡಿಜಿಪಿ ಅಲೋಕ್ ಮೋಹನ್ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹೆಚ್ಚುವರಿ ಆಯುಕ್ತರು, ಡಿಐಜಿಗಳು ಹಾಗೂ ಎಲ್ಲಾ ಡಿಸಿಪಿಗಳ ಜತೆ ಇಂದು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನಾಲ್ಕು ಪ್ರಮುಖ ಪ್ರಕರಣಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ದಿಗ್ವಿಜಯ ನ್ಯೂಸ್ಗೆ ಮಾಹಿತಿ ಲಭಿಸಿದೆ.
ಕಾಟನ್ ಪೇಟೆ ಠಾಣೆಯಲ್ಲಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ದಾಖಲಾಗಿದ್ದ ನಕಲಿ ದರೋಡೆ ಪ್ರಕರಣ, ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ, ಬಿಟ್ ಕಾಯಿನ್ ಪ್ರಕರಣ ಮತ್ತು ನಾಗವಾರ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣದ ಪ್ರಕರಣಗಳ ತನಿಖೆ ಮತ್ತೊಮ್ಮೆ ಶುರುವಾಗುವ ಸಾಧ್ಯತೆ ಇದೆ. ನಾಲ್ಕು ಪ್ರಕರಣಗಳ ತನಿಖಾ ಹಂತ ಮತ್ತು ಸ್ಥಿತಿಗಳ ಬಗ್ಗೆ ಮಾಹಿತಿಯನ್ನು ಡಿಜಿಪಿ ಕೇಳಲಿದ್ದಾರೆ ಎನ್ನಲಾಗಿದೆ. ಈ ಪ್ರಕರಣಗಳ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಯಬಹುದು ಎಂದು ದಿಗ್ವಿಜಯ ನ್ಯೂಸ್  ಮಾಹಿತಿ ಲಭಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
