ಬೆಂಗಳೂರು:ರಾಜ್ಯದಲ್ಲಿ ಕರೊನಾ ವೈರಸ್ ಪ್ರಸರಣ ದಿನೇದಿನೆ ಹೆಚ್ಚುತ್ತಿದ್ದು, ತೀವ್ರ ಆತಂಕ ಸೃಷ್ಟಿಯಾಗಿದೆ. ಪ್ರತಿದಿನ 300ರ ಆಸುಪಾಸಿನಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಕರೊನಾ ಸಮುದಾಯ ಪ್ರಸರಣವಾಗಿದೆಯಾ ಎಂಬ ಅನುಮಾನ ಬಲವಾಗಿ ಕಾಡುತ್ತಿದೆ. ಮತ್ತೆ ಲಾಕ್​ಡೌನ್​ ಅಗತ್ಯ ಬರಬಹುದಾ ಎಂಬ ಮಾತುಗಳೂ ಕೇಳಿಬರುತ್ತಿವೆ.
ಹೀಗಿರುವಾಗ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲಿ ಮಾತನಾಡಿ ರಾಜ್ಯದ ಜನರಿಗೆ ಧೈರ್ಯ ತುಂಬಿದ್ದಾರೆ. ಹಾಗೇ ಮನವಿಯನ್ನೂ ಮಾಡಿದ್ದಾರೆ.
ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕರೊನಾ ಪ್ರಸರಣದ ಪ್ರಮಾಣ ಕಡಿಮೆ ಇದೆ. ಇನ್ನೂ ನಿಯಂತ್ರಣ ತಪ್ಪಿಲ್ಲ. ಆದರೂ ಕಳೆದ 15 ದಿನಗಳಿಂದ ವೈರಸ್​ ಪ್ರಸರಣ ಪ್ರಮಾಣ ಹೆಚ್ಚಿದ್ದು ಅದರ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಚರ್ಚಿಸಲು ನಾಳೆ ಕೃಷ್ಣಾದಲ್ಲಿ (ಜೂನ್​ 26) ಬೆಂಗಳೂರಿನ ಶಾಸಕರು, ಸಚಿವರ ಸಭೆ ಕರೆಯಲಾಗಿದೆ ಎಂದಿದ್ದಾರೆ.ಇದನ್ನೂ ಓದಿ:ಯೋಗಗುರು ಬಾಬಾ ರಾಮ್​ದೇವ್​ಗೆ ಮಹಾ ಸಚಿವರ ಖಡಕ್​ ವಾರ್ನಿಂಗ್
ಬೆಂಗಳೂರು ನಗರದಲ್ಲಿ ಸೋಂಕು ಹೆಚ್ಚಾಗಿರುವ ಪ್ರದೇಶಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಬೆಂಗಳೂರು ನಗರ ಮತ್ತೆ ಸಂಪೂರ್ಣ ಲಾಕ್​ಡೌನ್​  ಆಗಬಾರದು ಎಂಬುದು ನಮ್ಮ ಆಶಯ. ಹಾಗೇ ಜನರಿಗೂ ಲಾಕ್​ಡೌನ್​ ಆಗುವುದು ಬೇಡ ಎಂದಾದರೆ ಅವರು  ಸಹಕಾರ ಕೊಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಾಗೇ ಸರ್ಕಾರದ ಎಲ್ಲ ನಿಯಮಗಳನ್ನೂ ಚಾಚೂತಪ್ಪದೆ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಕ್ಟೋಬರ್​ವರೆಗೂ ಬದಲಾಗೋಲ್ಲ ಪಾಕಿಸ್ತಾನದ ಬಣ್ಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
