ದಾವಣಗೆರೆ:ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.
ಹಿಂದಿ ಭಾಷೆಯ ಬಗ್ಗೆ ಪಕ್ಷದ ನಿಲುವೇನು ಎಂಬುದಕ್ಕೆ ಪ್ರತಿಕ್ರಿಯಿಸಿ, ಸ್ಪಷ್ಟವಾಗಿ ತಿಳಿಸಲಾಗಿದೆ. ಭಾಷಾವಾರು ಪ್ರಾಂತ್ಯಗಳಾದ ಮೇಲೆ ಪ್ರಾದೇಶಿಕತೆಗೆ ಮಹತ್ವ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ , ಬೇರಾವುದೇ ಭಾಷೆ ಅಲ್ಲ ಎಂದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯೂಪಿಎಸ್‍ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.
ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮಧುಮಗನ ಮೆರವಣಿಗೆ ಮಾಡಿದ್ದು ಹೀಗೆ… ವಿಡಿಯೋ ವೈರಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
