ಬೆಂಗಳೂರು: ಆಪರೇಷನ್ ಹಸ್ತಕ್ಕೆ ಒತ್ತು ನೀಡಿ ಜೆಡಿಎಸ್‌ನ ಮುಖಂಡರನ್ನು ದೊಡ್ಡ ಪ್ರಮಾಣದಲ್ಲಿ ಸೆಳೆಯುತ್ತಿರುವ ಕೆಪಿಸಿಸಿ ಅಧ್ಯಕ್ಷರಿಗೆ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಎಚ್ಚರಿಕೆ ನೀಡಿದ್ದರು. ಇದಕ್ಕೆ ಡಿ.ಕೆ ಶಿವಕುಮಾರ್ ಸೋಮವಾರ ತಿರುಗೇಟು ನೀಡಿದ್ದಾರೆ.ಈ ಹಿಂದೆ ನೀವು ಕೂಡ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್, ಫುಟ್ಬಾಲ್ ಗೇಮ್ ಆಡಿಲ್ಲವೇ? ಈಗ ನೀವು ಯಾರನ್ನು ಬೇಕಾದರೂ ಕಟ್ಟಿಹಾಕಿಕೊಳ್ಳಿ, ಮನೆಯೊಳಗೇ ಕೂಡಿ ಹಾಕಿಕೊಳ್ಳಿ. ನಾವು ಬೇಡ ಎನ್ನುವುದಿಲ್ಲ ಎಂದು ಡಿಕೆಶಿ ಸವಾಲು ಹಾಕಿದರು.ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ಎಂದು ಜೆಡಿಎಸ್ ವರಿಷ್ಠರನ್ನು ಡಿಕೆಶಿ ಕುಟುಕಿದರು.ಸೋಮವಾರ ಜೆಡಿಎಸ್ ಮುಖಂಡ ಚನ್ನಪಟ್ಟಣ ಮಾಜಿ ಶಾಸಕ ಎಂ.ಸಿ ಅಶ್ವಥ್ ಹಾಗೂ ಅವರ ಬೆಂಬಲಿಗರನ್ನು ಕಾಂಗ್ರೆಸ್‌ಗ ಬರಮಾಡಿಕೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಮಿಸ್ಟರ್ ಡಿ.ಕೆ. ಶಿವಕುಮಾರ್ ನಿಮ್ಮ ಆಟ ನಡೆಯುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ, ಅವರು ದೊಡ್ಡವರು. ಬಹಳ ಗೌರವದಿಂದ ಸಂತೋಷದಿಂದ ಅವರ ಮಾತನ್ನು ಸ್ವೀಕರಿಸುತ್ತೇನೆ. ಆದರೆ, ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು? ಎಂದು ಹಾಸ್ಯ ಮಾಡಿದರು.ಮಹಾತ್ಮಗಾಂಧಿ ಜನ್ಮದಿನದಂದು ನಮ್ಮ ಪಕ್ಷದ ಸಿದ್ಧಾಂತ ನಂಬಿ ಬಂದಿರುವ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ರಾಜ್ಯಾದ್ಯಂತ ಮೂಲೆ ಮೂಲೆಯಿಂದ ಸಾವಿರಾರು ಮಂದಿ ಪಕ್ಷ ಸೇರಲು ಮುಂದಾಗಿದ್ದಾರೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡರು ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಚಿವ ಜಮೀರ್ ಅಹ್ಮದ್, ಸಂಸದ ಡಿ.ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಚಂದ್ರಪ್ಪ, ಶಾಸಕರಾದ ಬಾಲಕೃಷ್ಣ, ವಿನಯ್ ಕುಲಕರ್ಣಿ, ಮಾಜಿ ಎಂಎಲ್ಸಿ ಪುಟ್ಟಣ್ಣ, ರಾಮನಗರ ಡಿಸಿಸಿ ಅಧ್ಯಕ್ಷ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − two =
Remember me
